ಚಳ್ಳಕೆರೆ : ಸ್ವಾತಂತ್ರ‍್ಯ ಅಮೃತ ಮಹೋತ್ಸವದ ಅಂಗವಾಗಿ
ಅಮೃತ ಸಮುದಾಯ ಅಭಿವೃದ್ಧಿ ಯೋಜನೆ
ಚಳ್ಳಕೆರೆ : ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯಡಿ ಆಯ್ಕೆಯಾದ ಚಳ್ಳಕೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಮೀರಾಸಾಬಿಹಳ್ಳಿ ವ್ಯಾಪ್ತಿಯ ರಂಗವ್ವನಹಳ್ಳಿ, ಹಾಗೂ ಉಪಕೇಂದ್ರದ ದೊಡ್ಡೇರಿ ಗ್ರಾಮ ಪಂಚಾಯಿತಿಯ ಭರಮಸಾಗರವನ್ನು ದತ್ತು ಗ್ರಾಮವನ್ನಾಗಿ ಆಯ್ಕೆ ಮಾಡಿಕೊಂಡು ತಾಲೂಕಿನ ಮೀರಾಸಾಬಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯಶಿಬಿರ ಆಯೋಜಿಸಿದ್ದರು.
ಈ ಕಾರ್ಯಕ್ರಮವನ್ನು ದೊಡ್ಡೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿಂಧೂ ಗಂಗಾಧರ ಅವರು ಉದ್ಘಾಟನೆ ಮಾಡಿ, ಮಾತನಾಡಿದÀ ಅವರು ಗ್ರಾಮದ 15ರಿಂದ 45ವರ್ಷದ ಮಹಿಳೆಯರಿಗೆ ಸಾಂಕ್ರಾಮಿಕ ರೋಗಗಳು ಹಾಗು ಅಪೌಷ್ಟಿಕತೆ ಬಗ್ಗೆ ಮಾಹಿತಿ ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದರು.
ಹಾಗೇಯೇ ಹೈಪರ್ ಟೆನ್ಷನ್, ಡಯಾಬಿಟಿಸ್, ಓರಲ್ ಕ್ಯಾನ್ಸರ್ ಬ್ರೆಸ್ಟ್ ಕ್ಯಾನ್ಸರ್ ಸರ್ವೈಕಲ್ ಕ್ಯಾನ್ಸರ್, ಹಿಮೋಗ್ಲೋಬಿನ್ ಪರೀಕ್ಷೆ, ಎತ್ತರ ತೂಕ & ಇನ್ನಿತರೆ ತಪಾಸಣೆ & ಪರೀಕ್ಷೆ ಮಾಡಿ ಮಾದರಿಗಳನ್ನು ಸಂಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮೀರಾಸಾಬಿಹಳ್ಳಿಯ ಸಿಬ್ಬಂದಿಗಳು ಆರೋಗ್ಯ ನಿರೀಕ್ಷಣಾ ಅಧಿಕಾರಿಗಳಾದ ನವೀನ್ ಕುಮಾರ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶಕುಂತಲಮ್ಮ, ಸುಲೋಚನಮ್ಮ, ಸಮುದಾಯ ಆರೋಗ್ಯ ಅಧಿಕಾರಿ ಶಬೀನಾಬಾನು, ಸ್ನೇಹ, ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ವಿಕ್ರಂ, ಮತ್ತು ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು ದೊಡ್ಡೇರಿ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಸಿಂಧೂ ಗಂಗಾಧರ್, ಸದಸ್ಯರು ಗ್ರಾಮದ ಮುಖಂಡರು ಮತ್ತು ಗ್ರಾಮಸ್ಥರು ಭಾಗಿಯಾಗಿದ್ದರು.