ಚಳ್ಳಕೆರೆ : ಭದ್ರಾ ಮೇಲ್ದೆಂಡೆ ಯೋಜನೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ರೈತರಿಗೆ ನೀರು ಕೊಡಬೇಕು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಬಾಕಿ ಇರುವ ಹಣವನ್ನು ಬಿಡುಗಡೆಗೊಳಿಸಿ ಶೀಘ್ರವೇ ಬಯಲು ಸೀಮೆಯ ಎಲ್ಲಾ ತಾಲೂಕುಗಳ ಕೆರೆಗಳಿಗೆ ನೀರುಣಿಸಬೇಕು ಎಂದು ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಒತ್ತಾಯಿಸಿದರು.
ಅವರು ನಗರದ ಪ್ರವಾಸಿ ಮಂದಿರದಲ್ಲಿ
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ 50 ವರ್ಷಗಳಿಂದ ನಿರಂತರವಾಗಿ ರೈತರ ಹೋರಾಟ ಮಾಡಿದರು ಕೂಡ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೇವಲ ಚುನಾವಣೆ ಸಂಧರ್ಭದಲ್ಲಿ ಮಾತ್ರ ನಮ್ಮನ್ನು ಬಳಸಿಕೊಂಡು ಅಧಿಕಾರ ಹಿಡಿದು ಮೇಲೆ ರೈತರನ್ನು ಮೆರೆಯುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇದೇ ಸಂಧರ್ಭದಲ್ಲಿ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ ಇತರ ರೈತ ಮುಖಂಡರು, ಕೆಆರ್ ಎಸ್ ಪಕ್ಷದ ಸಂಚಾಲಕ ಮಹೇಶ್ ಇತರರು ಇದ್ದರು..


