ಚಳ್ಳಕೆರೆ : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಇಂದು ತಳಕು ಬೆಸ್ಕಾ ಕಚೇರಿ ಮುಂದೆ ತಮಟೆ ಚಳುವಳಿ ನಡೆಸಿ ರೈತರ ಪಂಪ್ ಸೆಟ್ ಗಳಿಗೆ ಸರಿಯಾದ ರೀತಿಯಲ್ಲಿ ವಿದ್ಯುತ್ ಹೊದಗಿಸಬೇಕು, ಹಾಗೂ ವಿದ್ಯುತ್ ಕಂಬಗಳ ಮೇಲೆ ಗಿಡ ಗಂಟೆಗಳು ಬೆಳೆದು ವಿದ್ಯುತ್ ಸರಿಯಾದ ಪ್ರಮಾಣದಲ್ಲಿ ವಿದ್ಯುತ್ ಪ್ರವಾಹಿಸುವುದಿಲ್ಲ ಎಂದು ಆರೋಪಿಸಿದರು.
ಇನ್ನೂ ಸ್ಥಳಕ್ಕೆ ದಾವಿಸಿದ ಬೆಸ್ಕಾಂ ಅಧಿಕಾರಿಗಳು ಮನವಿ ಸ್ವೀಕರಿಸಿ ರೈತರ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ.
ಇದೇ ಸಂಧರ್ಭದಲ್ಲಿ ರೈತ ಸಂಘದ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಹಾಗೂ ಇತರ ಮುಖಂಡರು, ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

