ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ರಘುಮೂರ್ತಿ ಅವರು 75ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ‘ಅಮೃತ ಭಾರತಿಗೆ ಕನ್ನಡದಾರತಿ’ ವಿದ್ಯಾರ್ಥಿಗಳ ಸಂಭ್ರಮದ ನಡಿಗೆಗೆ ಚಳ್ಳಕೆರೆ ನಗರದ ಎಚ್ ಪಿ ಪಿ ಸಿ ಕಾಲೇಜು ಆವರಣದಲ್ಲಿ ಚಾಲನೆ ನೀಡಿದರು.
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ದಾವಣಗೆರೆ ವಿಶ್ವವಿದ್ಯಾಲಯ, ಚಳ್ಳಕೆರೆ ಹೆಚ್ ಪಿಸಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸಾಂಸ್ಕೃತಿಕ, ಕ್ರೀಡೆ, ಎನ್. ಎಸ್.ಎಸ್. ರೋವರ್ಸ್ ಮತ್ತು ರೆಂಜರ್ಸ್, ಯೂತ್ ರೆಡ್ ಕ್ರಾಸ್ ವಿವಿಧ ಸಮಿತಿಗಳ ಸಂಯುಕ್ತಾಶ್ರಯದಲ್ಲಿ ಸಂಭ್ರಮದ ನಡಿಗೆಯನ್ನು ಆಯೋಜಿಸಲಾಗಿತ್ತು.
ಈ ವೇಳೆ ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಡಿ ಮಡಿದ ಮಹನೀಯರ ತ್ಯಾಗ, ಬಲಿದಾನದ ಬಗ್ಗೆ ಜನ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಹೆಚ್ ಪಿ ಪೀ ಸಿ ಕಾಲೇಜು ಪ್ರಾಂಶುಪಾಲರಾದ ನರಸಿಂಹಮೂರ್ತಿ ಮತ್ತು ಉಪನ್ಯಾಸಕರಗಳು ಮತ್ತು ನಗರಸಭಾ ಸದಸ್ಯರಾದ ರಮೇಶ್ ಗೌಡ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷರಾದ ವೀರೇಶ್ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.