ಪ್ರತಿಯೊಬ್ಬರ ಮನೆಯ ಮೇಲೆ ರಾಷ್ಟ್ರಧ್ವಜಾ ಆರಾಧಿಸಬೇಕು ತಹಶೀಲ್ದಾರ್ ಎನ್ .ರಘುಮೂರ್ತಿ
ಕೇಂದ್ರ ಮತ್ತು ರಾಜ್ಯ ಸರ್ಕಾರ ಅಮೃತಧಾರಿತಿಗೆ ಕನ್ನಡಧಾರತಿ ಎಂಬ ವಿನೂತನ ಕಾರ್ಯಕ್ರಮದ ಮೂಲಕ ಸ್ವಾತಂತ್ರ ದಿನಾಚರಣೆಯನ್ನು ಆಚರಣೆ ಮಾಡಬೇಕು ಎಂದು ತಹಶೀಲ್ದಾರ್ ಎನ್ ರಘುಮೂರ್ತಿ ಹೇಳಿದ್ದಾರೆ.
ನಾಯಕನಹಟ್ಟಿ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ತಾಲೂಕು ಆಡಳಿತ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಚಿತ್ರದುರ್ಗ ಇವರ ಸಯೋಗದಲ್ಲಿ ಆಯೋಜಿಸಿದ ಹರ್ ಘರ್ ತಿರಂಗಾ ಜಾಗೃತಿ ಜಾಥ ಹಾಗೂ ಪಥ ಸಂಚಲನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು
ರಾಜ್ಯ ಸರ್ಕಾರ ಒಂದು ನಿರ್ದಿಷ್ಟವಾದ ಸುತ್ತೂಲೆಯನ್ನು ಹೊರಡಿಸಿದೆ ಆಗಸ್ಟ್ 13 ರಿಂದ 15 ರವರೆಗೆ ಪ್ರತಿಯೊಂದು ದೇಶದ ಪ್ರತಿಯೊಂದು ಜಿಲ್ಲೆ ತಾಲೂಕು ಹೋಬಳಿ ಗ್ರಾಮಗಳಲ್ಲಿ ಪ್ರತಿಯೊಂದು ಮನೆಯ ಮೇಲೆ ರಾಷ್ಟ್ರಧ್ವಜ ಆರಾಧಿಸಬೇಕು ಎಂದು ಸರ್ಕಾರ ಸಂಕಲ್ಪ ಮಾಡಿದೆ,
ಈ ನಿಟ್ಟಿನಲ್ಲಿ ಪ್ರತಿಯೊಬ್ಬರು
75ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ‘ಅಮೃತ ಭಾರತಿಗೆ ಕನ್ನಡದಾರತಿ’ ಕಾರ್ಯಕ್ರಮದ ಮೂಲಕ ದೇಶಾಭಿಮಾನ ದೇಶಭಕ್ತಿ ಪ್ರತಿಯೊಬ್ಬ ಪ್ರಜೆ ಬೆಳೆಸಿಕೊಳ್ಳಬೇಕು
ಸ್ವಾತಂತ್ರ ಹೋರಾಟದಲ್ಲಿ ಹೋರಾಡಿದ ಮಹನೀಯರ ತ್ಯಾಗ ಬಲಿದಾನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಈವೇಳೆ ಪೊಲೀಸ್ ಉಪನಿರೀಕ್ಷಕರಾದ ಜೆ ಶಿವರಾಜ್ ಮಾತನಾಡಿ ಕೇಂದ್ರ ಸರ್ಕಾರ ಆಜಾದಿ ಕಾ ಅಮೃತ ಮಹೋತ್ಸವ ಎಂಬ ಮಹತ್ವವಾದ ಕಾರ್ಯಕ್ರಮವನ್ನು ಜಾರಿಗೆ ತಂದಿದೆ
ಕೇವಲ ಆಗಸ್ಟ್ ತಿಂಗಳ ಈ ಒಂದು ವಾರಕ್ಕೆ ರಾಷ್ಟ್ರಧ್ವಜ ಹಾರಿಸುವುದು ಸೀಮಿತವಾಗಬಾರದು ಪ್ರತಿಯೊಬ್ಬರೂ ಸಂಕಲ್ಪ ಮಾಡಲೇಬೇಕು
ಭಾರತ ದೇಶದಲ್ಲಿ ಕಾನೂನು ಪಾಲನೆ ಮಾಡಬೇಕು ದೇಶದ ಎಲ್ಲಾ ಸೌಲಭ್ಯಗಳನ್ನು ಪಡೆಯುತ್ತೆ ಬಂದಿದ್ದೇವೆ
ನಮ್ಮ ದೇಶಕ್ಕೆ ನಮ್ಮ ಕೊಡುಗೆ ಏನು ಎಂಬುದು ಪ್ರತಿಯೊಬ್ಬ ಪ್ರಜೆಯು ಅರ್ಥೈಸಿಕೊಳ್ಳಬೇಕು
ಈ ಸಂದರ್ಭದಲ್ಲಿ ನೂತನ ಪಟ್ಟಣ ಪಂಚಾಯತಿ ಸದಸ್ಯ ಕೆ ಪಿ ತಿಪ್ಪೇಸ್ವಾಮಿ, ದುರುಗಪ್ಪ, ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಎನ್ ಟಿ ಕೊಡಿ ಭೀಮರಾಯ್,
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಕೆ ಎಂ ಶಿವ ಸ್ವಾಮಿ, ಪಿಎಸ್ಐ -2 ಎಸ್ ಬಸವರಾಜ್, ರಾಜಸ್ವ ನಿರೀಕ್ಷಕ ಚೇತನ್ ಕುಮಾರ್,
ಪತ್ರಕರ್ತ ಧನಂಜಯ, ಪಟ್ಟಣ ಪಂಚಾಯತಿ ಸಿಬ್ಬಂದಿಗಳಾದ ಬಸಣ್ಣ, ಶಿವಕುಮಾರ್, ಸುರೇಶ್ ತಿಪ್ಪೇಸ್ವಾಮಿ, ಸಂದೀಪ್, ದಯಾನಂದ್, ಮಧು,
ವಿದ್ಯಾ ವಿಕಾಸ ಶಾಲೆಯ ಶಿಕ್ಷಕ- ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು,