ಚಳ್ಳಕೆರೆ :
ರೈತರ ಅಪಾಯಕಾರಿ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳುವಂತೆ ಮತ್ತು ರೈತರು ಬೆಳೆದಂತಹ ಕೃಷಿ ಉತ್ಪನ್ನಗಳಿಗೆ ಯೋಗ್ಯ ಬೆಲೆಯನ್ನು MSP ಕೊಡುತ್ತೇವೆ ಎಂದು ಸುಳ್ಳು ಭರವಸೆಗಳನ್ನು ಕೊಟ್ಟಂತಹ ರಾಜ್ಯ ಸರ್ಕಾರದ ವಿರುದ್ಧ ಮತ್ತು ಚಿತ್ರದುರ್ಗ ಜಿಲ್ಲೆಗೆ ನೀರು ಹರಿಸುವ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳು ಸಂಪೂರ್ಣ ಸ್ಥಗಿತಗೊಂಡಿದ್ದು ಇವೆಲ್ಲದರ ವಿರುದ್ಧ ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ನಡೆಸಿದರು.
ಇನ್ನೂ ಚಳ್ಳಕೆರೆ ತಾಲೂಕಿನಿಂದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಭಾಗವಹಿಸಿ ತಮ್ಮ ಹಕ್ಕೊತ್ತಾಯಗಳ ಮೂಲಕ ಪ್ರತಿಭಟಿಸಿದರು.
ಇದೇ ಸಂಧರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಇತರರು ಪಾಲ್ಗೊಂಡಿದ್ದರು.

