ಮಕ್ಕಳಲ್ಲಿರುವ ವಿಶೇಷ ಪ್ರತಿಭೆಗಳಿಗೆ ಪ್ರತಿಭಾ ಕಾರಂಜಿ ವೇದಿಕೆ : ಬಿಇಓ.ಕೆಎಸ್.ಸುರೇಶ್
ಚಳ್ಳಕೆರೆ : ಮಕ್ಕಳಲ್ಲಿರುವ ವಿಶೇಷ ಪ್ರತಿಭೆಗಳನ್ನು ಗುರುತಿಸಲು ಪ್ರತಿಭಾ ಕಾರಂಜಿ ಯಂತಹ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಕೆಎಸ್.ಸುರೇಶ್ ಹೇಳಿದ್ದಾರೆ.
ಚಳ್ಳಕೆರೆ ತಾಲೂಕಿನ ಘಟಪರ್ತಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿ ಮಾತನಾಡಿದ್ದಾರೆ
ಇಂತಹ ಪ್ರತಿಭೆಗಳನ್ನು ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕು ತಾಲೂಕು, ಜಿಲ್ಲಾ, ಹಾಗೂ ರಾಜ್ಯ ಮಟ್ಟಕ್ಕೆ ಸ್ಪರ್ಧಿಸುವಂತೆ ಮಕ್ಕಳನ್ನು ಪ್ರೇರೆಪಿಸಬೇಕು, ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಅನಾವರಣ ಮಾಡಬೇಕು ಎಂದು ಕಿವಿ ಮಾತು ಹೇಳಿದ್ದಾರೆ.
ಕಾರ್ಯಕ್ರಮವನ್ನು ಎಸ್‌ಡಿಎಸ್‌ಎಂ ಅಧ್ಯಕ್ಷ ಸಿ.ಯಲ್ಲಪ್ಪ ಉದ್ಘಾಟಿಸಿದರು,
ಈದೇ ಸಂಧರ್ಭದಲ್ಲಿ ಅಕ್ಷರ ದಾಸೋಹ ಸಹಾಯಕ ನಿದೇರ್ಶಕ ತಿಪ್ಪೆಸ್ವಾಮಿ, ಸಿಆರ್‌ಪಿ ಶಿವಣ್ಣ, ಮುಖ್ಯ ಶಿಕ್ಷಕ ಎಸ್.ಮಂಜಪ್ಪ, ಸಹ ಶಿಕ್ಷಕ ಕೆ.ರಾಜಣ್ಣ, ವಸತಿ ಪ್ರೌಢ ಶಾಲೆ ಮುಖ್ಯ ಶಿಕ್ಷಕರಾದ ಬಿ.ಜಿ.ಶಾಂತಮ್ಮ, ಈಶ್ವರಪ್ಪ, ಲಲಿತಮ್ಮ, ಬಸವರಾಜ್, ಇತರರು ಪಾಲ್ಗೊಂಡಿದ್ದರು.
.