ನಾಯಕನಹಟ್ಟಿ:: ಶಾಲಾ ಕಾಲೇಜುಗಳ ಅಕ್ಕಪಕ್ಕದಲ್ಲಿ ತಂಬಾಕು ಮಾರಾಟ ಮಾಡುವಂತಿಲ್ಲ ತಂಬಾಕು ಮಾರಾಟ ಮಾಡುವುದು ಕಂಡುಬಂದಲ್ಲಿ ದಂಡ ವಿಧಿಸಲಾಗುತ್ತದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಅಧಿಕಾರಿ ಪ್ರಭುದೇವ್ ಅವರು ಹೇಳಿದ್ದಾರೆ.
ಪಟ್ಟಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಹಾಗೂ ತಾಲೂಕು ಆರೋಗ್ಯ ಇಲಾಖೆ ಪಟ್ಟಣ ಪಂಚಾಯಿತಿ ಪೊಲೀಸ್ ಇಲಾಖೆ ವತಿಯಿಂದ ತಂಬಾಕು ನಿಯಂತ್ರಣ ವಿವಿಧ ಅಂಗಡಿಗಳ ಮೇಲೆ ಕಾರ್ಯಾಚರಣೆ ನಡೆಸಿ ಮಾತನಾಡಿದ್ದಾರೆ
ಪ್ರತಿಯೊಬ್ಬ ಅಂಗಡಿ ಮಾಲಕರು ತಮ್ಮ ಅಂಗಡಿಯ ಮುಂಭಾಗದಲ್ಲಿ ಧೂಮಪಾನ ನಿಷೇಧಿಸಿ ಎಂದು ಫಲಕವನ್ನು ಹಾಕಬೇಕು 18 ವರ್ಷ ಒಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನ ಮಾಡುವಂತಿಲ್ಲ ಎಂಬ ಎರಡು ನಾಮಪಲಕಗಳನ್ನು ಹಾಕಬೇಕು.
ತಂಬಾಕು ಉತ್ಪನ್ನಗಳ ಮೇಲೆ ಶೇಕಡ 85ರಷ್ಟು ವಾರ್ನಿಂಗ್ ಉತ್ಪನ್ನಗಳನ್ನು ಮಾರಾಟ ಮಾಡಬೇಕು ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶಣ ಅಧಿಕಾರಿ ಪ್ರಭು ದೇವ ರವರು ತಿಳಿಸಿದ್ದಾರೆ.

ಈ ವೇಳೆ ತಾಲೂಕು ಆರೋಗ್ಯ ಅಧಿಕಾರಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಅಧಿಕಾರಿ ಡಾ ಕಾಶಿ ರವರು ಮಾತನಾಡಿ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಮಾರಾಟ ಮಾಡುವಂತಿಲ್ಲ ಮುಲಾಜಿಲ್ಲದೆ ಕೇಸ್ ಕೇಸ್ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ .

ನಂತರ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಬಿ ತಿಪ್ಪೇಸ್ವಾಮಿ ಮಾತನಾಡಿ ಸಾರ್ವಜನಿಕರು ತಂಬಾಕು ಮುಕ್ತ ಪಟ್ಟಣವನ್ನಾಗಿಸಲು ಸಹಕರಿಸಬೇಕು ಎಂದು ಸಾರ್ವಜನಿಕರಿಗೆ ಮನವರಿಕೆ ಮಾಡಿದರು.

ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ತಿಪ್ಪೇಸ್ವಾಮಿ ಪಟ್ಟಣ ಪಂಚಾಯತಿ ಸಿಬ್ಬಂದಿ ಟಿ ತಿಪ್ಪೇಸ್ವಾಮಿ, ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಗೋವಿಂದರಾಜ್ ಸೇರಿದಂತೆ ಉಪಸ್ಥಿತರಿದ್ದರು

About The Author

Namma Challakere Local News
error: Content is protected !!