ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್‌ಗೆ ಸ್ವಾಗತ ಕೋರಿದ ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ : ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಅವರು ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಅವರೊಂದಿಗೆ ವಿವಿಧ ಮಠಗಳ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ, ಮಡಿವಾಳ ಗುರುಪೀಠದ ಬಸವ ಮಾಚಿದೇವ ಸ್ವಾಮೀಜಿ, ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಾಜ್ಪೀರ್ ಕಾರ್ಯಾಧ್ಯಕ್ಷ ಹಾಲೇಶ್, ಮಾಜಿ ಸಂಸದರಾದ ಬಿಎನ್ ಚಂದ್ರಪ್ಪ, ಕಾಂಗ್ರೆಸ್ ಮುಖಂಡರಾದ ಹನುಮಲಿ ಷಣ್ಮುಖಪ್ಪ ಮತ್ತು ಮುಂತಾದ ಮುಖಂಡರು ಉಪಸ್ಥಿತರಿದ್ದರು.
ನಂತರ ಈದೇ ಸಂಧರ್ಭದಲ್ಲಿ ಚಳ್ಳಕೆರೆ ನಗರಸಭೆ ಅಧ್ಯಕ್ಷೆ ಸುಮಕ್ಕ ಅಂಜಿನಪ್ಪ ಹಾಗೂ ನಗರಸಭೆ ಸದಸ್ಯ ಸುಮಬರಮಯ್ಯ, ಜೈತುಂಬಿ, ಜಿಲ್ಲಾ ಪಂಚಾಯತ್ ಸದಸ್ಯ ಬಿಪಿ.ಪ್ರಕಾಶ್‌ಮೂರ್ತಿ ಹಾಗೂ ಕಾಂಗ್ರೆಸ್ ಮುಖಂಡರಾದ ಹಳೇ ಟೌನ್ ವೀರಭದ್ರ, ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಸಮಿತಿ ಪರವಾಗಿ ಎಂಬಿ.ಪಾಟೀಲ್ ರವರಿಗೆ ಸನ್ಮಾನಿಸಲಾಯಿತು