ಮಕ್ಕಳ ಪ್ರತಿಭೆ ಗುರುತಿಸಲು ಕಲೋತ್ಸವ ಉತ್ತಮ ವೇದಿಕೆ : ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ ತಾಲೂಕಿನ ದೊಡ್ಡಚೆಲ್ಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಹೋಬಳಿ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕ ಟಿ. ರಘುಮೂರ್ತಿ ಪಾಲ್ಗೊಂಡು ಪ್ರತಿಭಾ ಕಾರಂಜಿಗೆ ಚಾಲನೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪರಶುರಾಂಪುರ ಹೋಬಳಿ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆಎಸ್.ಸುರೇಶ್, ಗ್ರಾಮ ಪಂಚಾಯತ್ ಅಧ್ಯಕ್ಷ ಸುಮಾ ತಿಮ್ಮರಾಯ, ಉಪಾಧ್ಯಕ್ಷ ಪ್ರಸನ್ನಕುಮಾರ್, ಹಾಗೂ ಸದಸ್ಯರುಗಳಾದ ಚಿದಾನಂದಪ್ಪ ,ಜಯಮ್ಮ, ರತ್ನಮ್ಮ ಮತ್ತು ಪರಶುರಾಮಪುರ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಗಳೂರು ಸ್ವಾಮಿ, ಮುಖಂಡರಾದ ಅನಿಲ್ ,ನಾಗರಾಜ್, ಬೊಪ್ಪಣ್ಣ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಚಿದಾನಂದಪ್ಪ, ಕೇಶವಣ್ಣ, ಜಯವೀರ ಚಾರಿ, ಪೋತರಾಜ್, ಗುಜ್ಜಾರಪ್ಪ ,ಪ್ರಕಾಶ್, ತಿಪ್ಪೇಸ್ವಾಮಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಶಿವಕುಮಾರಸ್ವಾಮಿ, ಕಿಸಾನ್ ಸೆಲ್ ಜಿಲ್ಲಾಧ್ಯಕ್ಷರಾದ ನಾಗರಾಜ್ , ದೊಡ್ಡರಂಗಪ್ಪ ಮತ್ತು ಮುಖಂಡರು, ಕಾರ್ಯಕರ್ತರು , ಸಾರ್ವಜನಿಕರು ಉಪಸ್ಥಿತರಿದ್ದರು.