ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ 59ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ
ಚಳ್ಳಕೆರೆ : ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ 2021- 22 ನೇ ಸಾಲಿನ 59 ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಭಾಗವಹಿಸಿ ಮಾತನಾಡಿದರು.
ವಾರ್ಷಿಕ ಸಭೆಯಲ್ಲಿ ಸಹಕಾರ ಬ್ಯಾಂಕ್‌ನ ವಾರ್ಷಿಕ ಸಾಧನೆ, ಲೆಕ್ಕಾಚಾರ, ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ಬ್ಯಾಂಕಿನ ಅಧ್ಯಕ್ಷರು ಹಾಗೂ ಮಾಜಿ ಸಚಿವ ಡಿ ಸುಧಾಕರ್ ಅಧ್ಯಕ್ಷತೆ ವಹಿಸಿದ್ದರು.
ಬ್ಯಾಂಕಿನ ಪ್ರಮುಖರು, ಅಧಿಕಾರಿಗಳು, ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.