ಅಕಾಲಿಕ ಮಳೆಗೆ ಬೆಳೆ ಹಾಗೂ ಜನ-ಜಾನುವಾರುಗಳು ಸಂಕಷ್ಟಕ್ಕೆ, ಅಧಿಕಾರಿಗಳ ತುರ್ತು ಸಭೆ : ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ : ಚಿತ್ರದುರ್ಗ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಪಾಲ್ಗೊಂಡು ತಾಲೂಕಿನಾದ್ಯಂತ ಸುಮಾರು ಒಂದು ವಾರದಿಂದ ಸುರಿದ ಅಕಾಲಿಕ ಮಳೆಗೆ ಬೆಳೆ ಮತ್ತು ಜನ ಜಾನುವಾರುಗಳಿಗೆ ನಷ್ಟವಾಗಿದ್ದು ತುರ್ತು ಸಭೆ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನ ಸಭೆ ಕೈಗೊಂಡರು.
ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ಸತ್ಯನಾರಾಯಣ ,ಕಾರ್ಯನಿರ್ವಾಹಕ ಅಧಿಕಾರಿಗಳಾದ ಹನುಮಂತಪ್ಪ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅಧಿಕಾರಿಗಳು, ಕಂದಾಯ ಇಲಾಖೆಯ ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.