ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಕಡೆ ಕಾರ್ಯಕ್ರಮ ವರದಾನ : ತಹಶೀಲ್ದಾರ್ ಎನ್ ರಘುಮೂರ್ತಿ

ಚಳ್ಳಕೆರೆ : ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಎಂಬ ಕಾರ್ಯಕ್ರಮವನ್ನು ಸೆ. 27 ರಂದು ತಾಲೂಕಿನ ಪಿ ಮಹದೇವಪುರ ಗ್ರಾಮ ಪಂಚಾಯತಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಲ್ಲಾ ಸಾರ್ವಜನಿಕರು ಕೂಡ ಸರ್ಕಾರದಿಂದ ಕೊಡು ಮಾಡುವಂತ ಮತ್ತು ಕಂದಾಯ ಇಲಾಖೆಯಲ್ಲಿರುವಂತ ಕ್ಲಿಷ್ಟ ಸಮಸ್ಯೆಗಳನ್ನು ಬಗೆಹರಿಸಿ ಕೊಳ್ಳಬೇಕೆಂದು ತಹಶೀಲ್ದಾರ್ ಎನ್ ರಘುಮೂರ್ತಿ ಹೇಳಿದರು

ಅವರು ತಾಲೂಕಿನ ಪಿ.ಮಹಾದೇವಪುರ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಪಂಚಾಯಿತಿ ಸದಸ್ಯರುಗಳು ಹಾಗೂ ಕಂದಾಯ ಇಲಾಖೆ ಮತ್ತು ಗ್ರಾಮೀಣ ಅಭಿವೃದ್ಧಿ ಇಲಾಖೆ ಅಧಿಕಾರಿಗಳೊಂದಿಗೆ ಮಾತನಾಡಿ ಕಾರ್ಯಕ್ರಮವನ್ನು ಕ್ಷೇತ್ರದ ಶಾಸಕ ಟಿ ರಘುಮೂರ್ತಿ ಉದ್ಘಾಟಿಸಲಿದ್ದು ತಾಲೂಕಿನ ಎಲ್ಲಾ ಅಧಿಕಾರಿಗಳು ಈಡೀ ದಿನ ಈ ಪಂಚಾಯತಿಯಲ್ಲಿ ಇರುತ್ತಾರೆ, ವಿವಿಧ ಇಲಾಖೆಗಳ ಯಾವುದೇ ಸಮಸ್ಯೆಗಳಿದ್ದಲ್ಲಿ ಮುಕ್ತವಾಗಿ ಅಂದು ಚರ್ಚಿಸಬಹುದಾಗಿದೆ.

ಕಂದಾಯ ಇಲಾಖೆಯಲ್ಲಿ ಸಾರ್ವಜನಿಕರಿಗೆ ನೀಡುವ ಎಲ್ಲಾ ಕೆಲಸಗಳನ್ನು ಪಂಚಾಯಿತಿ ಮಟ್ಟದಲ್ಲಿನ ಈ ಒಂದು ಕಾರ್ಯಕ್ರಮದಲ್ಲಿ ರೈತರ ಮನೆ ಬಾಗಿಲಿಗೆ ಬಂದು ಅವರ ಎಲ್ಲ ಕೆಲಸ ಕಾರ್ಯಗಳನ್ನು ಹಾಗೂ ಅವರ ಆಶೋತ್ತರಗಳನ್ನು ಈಡೇರಿಸಿ ನೆಮ್ಮದಿ ಬದುಕನ್ನು ಕಟ್ಟಿಕೊಳ್ಳಲು ಅಧಿಕಾರಿಗಳು ಮತ್ತು ನೌಕರರು ಸಹಕಾರಿಯಾಗಬೇಕೆಂಬುದು ಸರ್ಕಾರದ ಆಶಯವಾಗಿದೆ.

ಈ ಹಿನ್ನೆಲೆಯಲ್ಲಿ ಈಗಾಗಲೇ ಚಳ್ಳಕೆರೆ ತಾಲೂಕಿನಲ್ಲಿ 58 ಗ್ರಾಮಗಳನ್ನು ಕಂದಾಯ ಇಲಾಖೆಗೆ ಸಂಬಂದಿಸಿದ ಸಮಸ್ಯೆಗಳನ್ನು ಬಗೆಹರಿಸಲಾಗಿದೆ.

ಅದೇ ರೀತಿ ಈ ಗ್ರಾಮದಲ್ಲೂ ಕೂಡ ಕಂದಾಯ ಇಲಾಖೆಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಗಮನಕ್ಕೆ ಮುಂಗಡವಾಗಿ ತರಬೇಕು ಈ ಬಗ್ಗೆ ಪ್ರತಿ ಹಳ್ಳಿಯಲ್ಲೇ ಪ್ರಚಾರಪಡಿಸಲಾಗಿದೆ ಎಲ್ಲ ಪಂಚಾಯತಿ ಸದಸ್ಯರುಗಳು ನಮ್ಮ ವ್ಯಾಪ್ತಿಯಲ್ಲಿ ಬರುವಂತ ಸಾರ್ವಜನಿಕ ಸಮಸ್ಯೆಗಳನ್ನು ಮುಕ್ತವಾಗಿ ತಿಳಿಸಿದಲ್ಲಿ ಬಗೆಹರಿಸುವ ಕೆಲಸವನ್ನು ಮಾಡಲಾಗುವುದು.

ಕಂದಾಯ ಇಲಾಖೆಯ ಪೌತಿ ಖಾತೆ, ಪೋಡಿ, ಪಿಂಚಣಿ ದಾರಿ, ಪ್ರವಾಹದಿಂದ ಉಂಟಾಗುವಂತ ಪರಿಹಾರಕ್ಕೆ ಸಂಬಂದಿಸಿದ ಸಮಸ್ಯೆಗಳು ಇನ್ನು ಹತ್ತು ಹಲವು ಸಮಸ್ಯೆಗಳನ್ನು ಬಗೆಹರಿಸಲಾಗುವುದು

ಈ ಭಾಗದ ಎಲ್ಲ ಸಾರ್ವಜನಿಕರು ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪಿ ಮಾದೇಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ತ್ಯಾಗರಾಜ್, ಸದಸ್ಯ ವೀರೇಶ, ಓಬಳೇಶ, ಶಿವಣ್ಣ, ರಾಜಶ್ವನಿರೀಕ್ಷಕರಾದಂತಹ ಮೋಹನ್ ಗ್ರಾಮ ಲೆಕ್ಕಾಧಿಕಾರಿಗಳಾದಂತಹ ದುರ್ಗಮ್ಮ ಮತ್ತಿತರು ಹಾಜರಿದ್ದರು

Namma Challakere Local News
error: Content is protected !!