ಸಮಸ್ಯೆ ಮುಕ್ತ ಗ್ರಾಮಕ್ಕೆ ಬೇಡರೆಡ್ಡಿಹಳ್ಳಿ ಗ್ರಾಪಂ. ಆಯ್ಕೆ : ತಹಶೀಲ್ದಾರ್ ಎನ್.ರಘುಮೂರ್ತಿ
ಚಳ್ಳಕೆರೆ : ಈಡೀ ತಾಲೂಕಿನಲ್ಲಿ ಸಮಸ್ಯೆ ಮುಕ್ತ ಗ್ರಾಮದ ಮೂಲಕ ರೈತರ ಸಂಕಷ್ಟಗಳಿಗೆ ಸದಾ ಸ್ಪಂಧಿಸುವ ತಾಲೂಕು ಆಡಳಿತ ಪ್ರತಿ ವಾರಕ್ಕೊಮ್ಮೆ ಸಮಸ್ಯೆ ಮುಕ್ತ ಗ್ರಾಮ ಮಾಡುವ ಮೂಲಕ ಆ ಗ್ರಾಮದ ಸರ್ವತೋಮುಖ ಅಭಿವೃದ್ದಿ ಕಂಕಣ ಬದ್ದರಾದ ತಹಶೀಲ್ದಾರ್ ಎನ್.ರಘುಮೂರ್ತಿ ಈ ಭಾರಿ ತಾಲೂಕಿನ ಬೇಡರೆಡ್ಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂರು ಗ್ರಾಮಗಳನ್ನು ಕಂದಾಯ ಇಲಾಖೆಯ ಸಮಸ್ಯೆ ಮುಕ್ತ ಗ್ರಾಮಗಳನ್ನಾಗಿ ಮಾಡುವ ಬಗ್ಗೆ ರೈತ ಪ್ರತಿನಿಧಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ್ದಾರೆ.
ತಾಲೂಕಿನ ಆಂಧ್ರದ ಗಡಿಯನ್ನು ಹಂಚಿಕೊAಡ ತಳಕು ಹೊಬಳಿಯ ವ್ಯಾಪ್ತಿಯ ಬೇಡರೆಡ್ಡಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕಹಳ್ಳಿ, ಬಂಜಿಗೆರೆ ಮತ್ತು ಬೇಡರೆಡ್ಡಿಹಳ್ಳಿ ಗ್ರಾಮದಲ್ಲಿ ಬಹುತೇಕ ರೈತರು ಬಡವರಿದ್ದು ಹಲವಾರು ವರ್ಷಗಳಿಂದ ಈ ಗ್ರಾಮಗಳಲ್ಲಿ ಪೌತಿಕತೆ, ಪೋಡಿ, ಪಿಂಚಣಿಗಳು ಹಾಗೂ ದಾರಿ ವಿವಾದಗಳು ಮತ್ತು ಇನ್ನಿತರೆ ಕಂದಾಯ ಇಲಾಖೆಯ ಸಮಸ್ಯೆಗಳಿದ್ದು ಇವುಗಳನ್ನು ಬಗೆ ಹರಿಸುವಂತೆ ಬೇಡರಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಮನವಿ ಮೇರೆಗೆ ಇಂದು ಬೆಳಗ್ಗೆ ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಾಧಿಕಾರಿಗಳೊಂದಿಗೆ ಬೇಡರಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಎನ್ ರಘುಮೂರ್ತಿ ಗ್ರಾಮ ಪಂಚಾಯಿತಿಯ ಸಾರ್ವಜನಿಕರೊಂದಿಗೆ ಸಂವಾದ ಸಭೆ ನಡೆಸಿದ ಅವರು ಈಗಾಗಲೇ ತಾಲೂಕಿನಲ್ಲಿ 68 ಗ್ರಾಮಗಳಲ್ಲಿ ಜಿಲ್ಲಾಧಿಕಾರಿಗಳ ಮತ್ತು ಈ ಕ್ಷೇತ್ರದ ಮಂತ್ರಿಗಳ ಸೂಚನೆಯಂತೆ ಕಂದಾಯ ಇಲಾಖೆಯ ಸಮಸ್ಯೆ ಮುಕ್ತ ಗ್ರಾಮಗಳನ್ನಾಗಿ ಮಾಡಲಾಗಿದೆ.
ಇದರಲ್ಲಿ ಮುಖ್ಯವಾಗಿ ದಾರಿ ವಿವಾದ, ಪೌತಿಕತೆ ಜಮೀನಿನ ಪೋಡಿ ಕೆಲಸ ಸ್ಮಶಾನ ಒತ್ತುವರಿ, ಪಿಂಚಣಿಗಳ ಪರೀಶಿಲನೆ ಹಾಗೂ ಇನ್ನಿತರ ಕಂದಾಯ ಇಲಾಖೆ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಲಾಗುವುದು
ಹತ್ತು ದಿನಗಳ ಕಾಲಾವಕಾಶ ನೀಡಿ ಈ ಅವಧಿಯಲ್ಲಿ ಸಮಸ್ಯೆಗಳ ಬಗ್ಗೆ ಸಮಗ್ರವಾಗಿ ಪರಿಶೀಲನೆ ಮಾಡಿ ಅಂತಿಮವಾಗಿ ಜಿಲ್ಲಾಧಿಕಾರಿಗಳನ್ನು ಈ ಸಭೆಗೆ ಆಹ್ವಾನಿಸಿ ಈ ಗ್ರಾಮಗಳನ್ನು ಸಮಸ್ಯೆ ಮುಕ್ತ ಗ್ರಾಮಗಳೆಂದು ಘೋಶಿಸಲಾಗುವುದು ಆದ್ದರಿಂದ ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬAಧಿಸಿದ ಮನವಿಯನ್ನು ಗ್ರಾಮ ಲೆಕ್ಕಾಧಿಕಾರಿ ಮತ್ತು ರಾಜಶ್ವ ನಿರೀಕ್ಷಕರಿಗೆ ಮನವಿ ಸಲ್ಲಿಸ ಬೇಕಾಗಿ ಮನವಿ ಮಾಡಿದರು
ಈ ಸಂದರ್ಭದಲ್ಲಿ ಬೇಡರೆಡ್ಡಿಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಜಯಲಕ್ಷ್ಮಿ, ಸದಸ್ಯ ಬಂಜಿಗೆರೆ ಅರುಣ್‌ಕುಮಾರ್, ತಿಮ್ಮಯ್ಯ ವೇಣು, ನಾಗೇಶ್‌ರೆಡ್ಡಿ, ರಾಜಶ್ವರಿಕ್ಷಕ ತಿಪ್ಪೇಸ್ವಾಮಿ, ಗ್ರಾಮ ಲೆಕ್ಕಾಧಿಕಾರಿ ಸತೀಶ್ ಹಾಜರಿದ್ದರು
ಪೋಟೋ : ಚಳ್ಳಕೆರೆ ತಾಲೂಕಿನ ಬೇಡರೆಡ್ಡಿಹಳ್ಳಿ ಗ್ರಾಮದಲ್ಲಿ ಸಮಸ್ಯೆಮುಕ್ತ ಗ್ರಾಮ ಘೋಷಣೆ ಮಾಡಲು ಸಾರ್ವಜನಿಕರೊಂದಿಗೆ ಸಂವಾದ ನಡೆಸುತ್ತಿರುವ ತಹಶೀಲ್ದಾರ್ ಎನ್.ರಘುಮೂರ್ತಿ