ಚಳ್ಳಕೆರೆ : ವಿದ್ಯಾರ್ಥಿಗಳು ಪಠ್ಯಪುಸ್ತಕಗಳ ಜೊತೆಯಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಗ್ರಾಮ ಪಂಚಾಯತಿ ಅಧ್ಯಕ್ಷ ಕೆ ಎಸ್ ಮಂಜಣ್ಣ ಹೇಳಿದ್ದಾರೆ.
ನಾಯಕನಹಟ್ಟಿ ಸಮೀಪದ ಗಜ್ಜುಗಾನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದರಿಂದ ಏಳನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಿಸಿ ಮಾತನಾಡಿದ್ದಾರೆ.
ಗ್ರಾಮೀಣ ಪ್ರದೇಶದ ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕು ಗುರುಗಳ ಮಾರ್ಗದರ್ಶನದಲ್ಲಿ ನಡೆಯಬೇಕು ಆಗ ಮಾತ್ರ ಉತ್ತಮ ಭವಿಷ್ಯ ರೂಪಿಸಲು ಸಾಧ್ಯ ಎಂದು ತಿಳಿಸಿದರು
ಇದೇ ವೇಳೆ ಎಸ್ ಡಿ ಎಂ ಸಿ ಅಧ್ಯಕ್ಷ ಜಿ ಎಸ್ ತಿಪ್ಪೇಸ್ವಾಮಿ, ಗ್ರಾಮ ಪಂಚಾಯತಿ ಉಪಾಧ್ಯಕ್ಷ ಪಾಲಮ್ಮ ಜಿ ಬೋರಯ್ಯ, ಸದಸ್ಯ ಬಸಕ್ಕ ತಿಪ್ಪೇಸ್ವಾಮಿ, ಡಿಎಸ್ಎಸ್ ಸಂಚಾಲಕರಾದ ಜಿ ಬಿ ತಿಪ್ಪೇಸ್ವಾಮಿ, ಮುಖ್ಯೋಪಾಧ್ಯಾಯರಾದ. ಸ್ವಾಮಿನಾಥ, ಪ್ರಭಾರಿ ಮುಖ್ಯ ಶಿಕ್ಷಕ ನಾಗರಾಜ್, ಸಹ ಶಿಕ್ಷಕ ಪೆನ್ನೋಬಳಿ, ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು