ಸತತ ಮಳೆಯಿಂದ ಜನ ಜೀವನ ಅಸ್ತವ್ಯಸ್ತ
ಗ್ರಾಮದ ಸ್ವಚ್ಚತೆಗೆ ಮೊದಲ ಆಧ್ಯತೆ ನೀಡಿ
ಸಾಂಕ್ರಮಿಕ ರೋಗಗಳು ಬಾರದಂತೆ
ಸಾರ್ವಜನಿಕರು ಎಚ್ಚರ ವಹಿಸಿ :
ಗ್ರಾಮ ಪಂಚಾಯತಿ ಅಧ್ಯಕ್ಷ ಕೆಎಸ್.ಮಂಜಣ್ಣ ಅಭಿಪ್ರಾಯ
ಚಳ್ಳಕೆರೆ : ಕಳೆದ ಒಂದು ತಿಂಗಳಿನಿAದ ಸತತ ಮಳೆಯಿಂದಾಗಿ ನಾಯಕನಹಟ್ಟಿ ಹೋಬಳಿ ವ್ಯಾಪ್ತಿಯ ಜನ ಜೀವನ ಅಸ್ತವ್ಯಸ್ತವಾಗಿದೆ, ಅದರಂತೆ ಈ ಭಾಗದ ಜನರು ಸಂಕಸ್ಟದÀಲ್ಲಿ ಜೀವನ ನಡೆಸುತ್ತಿದ್ದಾರೆ.
ಗ್ರಾಮಗಳಲ್ಲಿ ಸ್ವಚ್ಚತೆ ಇಲ್ಲದೆ ಆರೋಗ್ಯಕರವಾದ ಜೀವನ ನಡೆಸಲು ತೊಂದರೆಯಾಗುತ್ತಿದೆ ಇನ್ನೂ ಸ್ವಚ್ಚತೆಗೆ ಆದ್ಯತೆ ನೀಡಬೇಕಾದ ಅಧಿಕಾರಿಗಳು ಮೌನ ವಹಿಸಿದ್ದಾರೆ.
ಇಗೇ ತಿಮ್ಮಪ್ಪಯ್ಯನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿ ಹಳ್ಳಿಗಳಾದ ಜಂಬಯ್ಯನಹಟ್ಟಿ, ಗಜ್ಜುಗಾನಹಳ್ಳಿ, ರಾಮಸಾಗರ ಓಬಯ್ಯನಹಟ್ಟಿ ಗ್ರಾಮಗಳಲ್ಲಿ ಚರಂಡಿ, ರಸ್ತೆಗಳು ಸ್ವಚ್ಛತೆ ಇಲ್ಲದೆ ಸಾರ್ವಜನಿಕರು ದಿನನಿತ್ಯದ ಬದುಕಿನಲ್ಲಿ ಹೈರಾಣಾಗಿದ್ದಾರೆ
ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಗ್ರಾಮ ಪಂಚಾಯತಿ ಅಧ್ಯಕ್ಷ ಕೆಎಸ್.ಮಂಜಣ್ಣ, ನಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗುವುದು ದಯಮಾಡಿ ಸಾರ್ವಜನಿಕರು ಸಾಂಕ್ರಮಿಕ ರೋಗಗಳು ಬಾರದಂತೆ ಮುನ್ನೆಚ್ಚರಿಕೆ ವಹಿಸಿ ತಮ್ಮ ಮನೆಯ ಸುತ್ತಮುತ್ತ ಸ್ವಚ್ಛತೆಯ ಮಾಡಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಗ್ರಾಮ ಪಂಚಾಯತಿ ಅಧ್ಯಕ್ಷ ಕೆ ಎಸ್ ಮಂಜಣ್ಣ ತಿಳಿಸಿದರು.
ಈ ಸಂದರ್ಭದಲ್ಲಿ ಸಿ.ಕುಮಾರ್, ಮಾದೇವಣ್ಣ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪೋಟೊ ಚಳ್ಳಕೆರೆ ತಾಲೂಕಿನ ತಿಮ್ಮಪ್ಪಯ್ಯನಹಳ್ಳಿಯಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಿ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷ ಕೆಎಸ್.ಮಂಜಣ್ಣ, ಜಾಗೃತಿ ಮೂಡಿಸಿದರು