ಚಿತ್ರದುರ್ಗ : ನೂತನ
ಜಿಲ್ಲಾಧಿಕಾರಿಯಾಗಿ ದಿವ್ಯ
ಪ್ರಭು ನೇಮಕ
ಚಿತ್ರದುರ್ಗ : ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಚುರುಕು
ಮುಟ್ಟಿಸುವ ಸಲುವಾಗಿ ಬರೋಬ್ಬರಿ 21 ಐಎಎಸ್
ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ
ಕಾರ್ಯನಿರ್ವಹಿಸುತ್ತಿದ್ದ ಕವಿತಾ ಎಸ್. ಮನ್ನಿಕೇರಿ
ಅವರನ್ನು ವರ್ಗಾವಣೆ ಮಾಡಿದ್ದು, ಆ ಸ್ಥಾನಕ್ಕೆ
ನೂತನ ಜಿಲ್ಲಾಧಿಕಾರಿಯಾಗಿ ದಿವ್ಯ ಪ್ರಭು ಅವರನ್ನು
ನೇಮಕ ಮಾಡಲಾಗಿದೆ. ಇನ್ನು ಸಿಇಒ ಆಗಿ
ಕಾರ್ಯನಿರ್ವಹಿಸುತ್ತಿದ್ದ ಡಾ.ಕೆ. ನಂದಿನಿ ದೇವಿ
ಅವರಿದ್ದ ಹುದ್ದೆಗೆ ಎಂ.ಎಸ್ ದಿವಾಕರ ಅವರನ್ನು
ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ
ಆದೇಶ ಹೊರಡಿಸಿದ್ದಾರೆ.
ಐಎಎಸ್ ಅಧಿಕಾರಿ ದಿವ್ಯ ಪ್ರಭು ಜಿ ಆರ್ ಜೆ. ಅವರು
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು
ನಿಗಮ ನಿಯಮಿತದಲ್ಲಿ ವ್ಯವಸ್ಥಾಪಕ
ನಿರ್ದೇಶಕರಾಗಿದ್ದು, ಅವರನ್ನು ತಕ್ಷಣದಿಂದ ಜಾರಿಗೆ
ಬರುವಂತೆ ಮುಂದಿನ ಆದೇಶದವರೆಗೆ ಚಿತ್ರದುರ್ಗ
ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಐಎಎಸ್ ಅಧಿಕಾರಿ ಎಂ.ಎಸ್.ದಿವಾಕರ, ಹೆಚ್ಚುವರಿ
ಕೃಷಿ ನಿರ್ದೇಶಕರಾಗಿದ್ದು, ಇವರನ್ನು ತಕ್ಷಣದಿಂದ
ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ
ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ
ನಿಯೋಜಿಸಲಾಗಿದೆ ಎಂದು ತಿಳಿಸಲಾಗಿದೆ