ಚಳ್ಳಕೆರೆ : ಅದ್ದೂರಿಯಾಗಿ ಜರುಗಿದ ಕನ್ನಡ ರಾಜ್ಯೋತ್ಸವ, ತಾಯಿಯಂತೆ ಕನ್ನಡವನ್ನು ಪ್ರೀತಿಸಿ : ಶಾಸಕ ಟಿ.ರಘುಮೂರ್ತಿ ಕರೆ

ಚಳ್ಳಕೆರೆ : ಕನ್ನಡ ಉಳಿವಿಗೆ ಪ್ರತಿಯೊಬ್ಬರೂ ಕಂಕಣ ಬದ್ದರಾಗಬೇಕು, ಇಂದಿನ ಆಧುನಿಕ ಯುಗದಲ್ಲಿ ತಂದೆ-ತಾಯಿಗಳಿಗೆ ನೀಡುವ ಗೌರವವನ್ನು ಕನ್ನಡ ಭಾಷೆಗೆ ನೀಡಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದ್ದಾರೆ.
ನಗರದ ಬಿಸಿನೀರು ಮುದ್ದಪ್ಪ ಸರಕಾರಿ ಪ್ರೌಢಶಾಲೆಯ ಆವರಣದ ಬಯಲು ರಂಗಮAದಿರದಲ್ಲಿ ರಾಷ್ಟಿçÃಯ ಹಬ್ಬಗಳ ಆಚರಣೆ ಸಮಿತಿವತಿಯಿಂದ ಆಯೋಜಿಸಿದ್ದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಭಾಗವಹಿಸಿ ಮಾತನಾಡಿದರು. ದಶಕಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಿ ಅನ್ಯಭಾಷೆಯನ್ನು ಕಲಿಯಬೇಕೆಂದು ಪರಕೀಯರು ತಮ್ಮ ವ್ಯಾಪಾರದ ಅಭಿವೃದ್ಧಿಗಾಗಿ ಅಖಂಡ ಭಾರತÀವನ್ನು ಹರಿದು ಹಂಚಿ ಹಲವಾರು ಪ್ರಾಂತ್ಯಗಳನ್ನಾಗಿ ಮಾಡಿಕೊಂಡು ತಮ್ಮ ದೇಶದ ಸಂಪತ್ತನ್ನು ಕೊಳ್ಳೆಹೊಡೆದರು ಇದನ್ನು ಮನಗಂಡ ನಮ್ಮ ಸಾಹಿತಿಗಳು, ಚಿಂತಕರು ಚಳುವಳಿ ಮೂಲಕ ಕನ್ನಡ ಭಾಷೆಯನ್ನಾಡುವ ಪ್ರದೇಶವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಲು ಸಾಧ್ಯವಾಯಿತು ಎಂದರು.
ತಹಶೀಲ್ದಾರ್ ಎನ್.ರಘುಮೂರ್ತಿ ಮಾತನಾಡಿ ಕನ್ನಡ ನೆಲ,ಜಲ, ಭಾಷೆಗೆ ಒತ್ತು ನೀಡಬೇಕು, ವ್ಯಾಪಾರ ವಹಿವಾಟು ನಡೆಸುತ್ತಿರುವ ಅಂಗಡಿ ಮುಗ್ಗಟ್ಟುಗಳಲ್ಲಿ ಕಡ್ಡಾಯವಾಗಿ ಕನ್ನಡದ ನಾಮ ಫಲಕರಗಳನ್ನು ಹಾಕಬೇಕು, ಪ್ರತಿಯೊಬ್ಬರ ಮನೆ ಮನಗಳಲ್ಲಿ ಕನ್ನಡ ರಾಜ್ಯೋತ್ಸವ ಹಬ್ಬದ ವಾತಾವರಣ ನಿರ್ಮಿಸುವಂತಾಗ ಬೇಕು ಸರಕಾರಿ ಕಚೇರಿಗಳಲ್ಲಿ ಕನ್ನಡ ಭಾಷೆಯಲ್ಲಿ ಆಡಳಿತ ನಡೆಸುವಂತೆ ಮಾಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದ ಮೊದಲು ತಾಲೂಕು ಕಚೇರಿ ಆವರಣದಲ್ಲಿ ಧ್ವಜರೋಹಣ ನೆರವೇರಿಸಿ ಭುವನೇಶ್ವರಿತಾಯಿಯ ಭಾವಚಿತ್ರದ ಮೆರೆವಣಿಗೆಯೊಂದಿಗೆ ಅಂಬೇಡ್ಕರ್ ವೃತ್ತ, ಈಗೇ ಪ್ರಮುಖ ರಸ್ತೆಗಳಲ್ಲಿ ಕನ್ನಡ ದ್ವಜ ಹಾಗೂ ಜಾನಪದ ಮೇಳಗಳೊಂದಿಗೆ ಮೆರವಣಿಗೆ ನಡೆಸಿ ವೇಧಿಕೆಯತ್ತ ಕರೆತರಲಾಯಿತು,
ಕಾರ್ಯಕ್ರದಲ್ಲಿ ನಗರಸಭೆ ಅಧ್ಯಕ್ಷೆ ಸುಮಕ್ಕ, ಉಪಾಧ್ಯಕ್ಷೆ ಮಂಜುಳಾ, ಸ್ಥಾಯಿ ಸಮಿತಿ ಅಧ್ಯಕ್ಷ ರುದ್ರನಾಯಕ, ಸದಸ್ಯರಾದ ರಮೇಶ್, ವೈ.ಪ್ರಕಾಶ್, ಮಲ್ಲಿಕಾರ್ಜುನ, ನಿರ್ಮಲ, ಸುಮ, ಕೆ.ವೀರಭದ್ರಯ್ಯ, ಪಾಲಮ್ಮ, ರಾಘವೇಂದ್ರ, ಕವಿತ, ಸಾವಿತ್ರಿ, ತಾಪಂ ಇಒ ಹೊನ್ನಪ್ಪ, ಪೌರಾಯುಕ್ತ ಸಿ.ಚಂದ್ರಪ್ಪ, ಸಿಪಿಐ ಸಮಿವುಲ್ಲಾ, ಬಿಇಒ ಸುರೇಶ್, ಸಿಡಿಪಿಒ ಕೃಷ್ಣಾಪ್ಪ, ಕೃಷಿ ಅದಿಕಾರಿ ಅಶೋಕ್, ರೇಷ್ಮೇ ಅಧಿಕಾರಿ ಕೆಂಚಾಜಿರಾವೋ, ಕಾರ್ಮಿಕ ನಿರೀಕ್ಷಕಿ ಕುಸುಮ, ಎಇಇ ಕಾವ್ಯ, ಗಾಯಕ ಮುತ್ತುರಾಜ್, ಇತರರಿದ್ದರು.
ಇದೇ ಸಂದರ್ಭದಲ್ಲಿ ಪತ್ರಿಕೊಧ್ಯಮದಲ್ಲಿ ತಿಮ್ಮಣ್ಣ, ಸೆರಿದಂತೆ ಐದು ಜನ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಫೊಟೋ. ಚಳ್ಳಕೆರೆ ನಗರದ ಸರಕಾರಿ ಪ್ರೌಢಶಾಲಾ ಆವರಣದಲ್ಲಿ ರಾಷ್ಟಿçÃಯ ಹಬ್ಬಗಳ ಆಚರಣ ಸಮಿತಿವಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆವಹಿಸಿ ಮಾತನಾಡಿದರು.

About The Author

Namma Challakere Local News
error: Content is protected !!