ಸರಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಭೋಗನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಮಕ್ಕಳ ದಿನಾಚರಣೆಯ ಪ್ರಯುಕ್ತ ಶಾಲೆಯ ವಿದ್ಯಾರ್ಥಿಗಳಿಗೆ ಶಾಲೆಯ ಹಳೆಯ ವಿದ್ಯಾರ್ಥಿಯಾದ, ಹಾಗೂ ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ಮ್ಯಾನೇಜರ್ ಬಿಎಸ್.ವೆಂಕಟೇಶ್ ಇವರಿಂದ ನೋಟ್ ಬುಕ್ ಮತ್ತು ಪೆನ್ನುಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿಯಾದ ಗೀತಾ ಎಸ್, ಸಹಶಿಕ್ಷಕರುಗಳಾದ ಮಹಾಸ್ವಾಮಿ ಬಿ ಎನ್, ಗೌಸ್ ಖಲೀಲ್, ಡಿ ಜೆ ಮಾರಣ್ಣ, ಸಿ ಶಿವಣ್ಣ ಉಪಸ್ಥಿತರಿದ್ದರು.