ಜನಸ್ನೇಹಿ ಪೊಲೀಸ್ ಆಡಳಿತ ವ್ಯವಸ್ಥೆಯಂತೆ :
ಸ್ಟೂಡೆಂಟ್ ಪೊಲೀಸ್ ಕೆಡೆಟ್
ಚಳ್ಳಕೆರೆ: ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೊಲೀಸ್ ವ್ಯವಸ್ಥೆ ಹಾಗೂ ಸರ್ಕಾರದ ಆಡಳಿತ ವ್ಯವಸ್ಥೆ ಮಾಹಿತಿ ನೀಡಲು ಸರ್ಕಾರ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಕಾರ್ಯಕ್ರಮ (ಎಸ್.ಪಿ.ಸಿ) ರೂಪಿಸಿದೆ’ ಎಂದು ಡಿವೈಎಸ್ಪಿ ಎಲ್.ರಮೇಶ್ ಕುಮಾರ್ ಹೇಳಿದರು.
ನಗರದ ಹೆಗ್ಗೆರೆ ತಾಯಮ್ಮ ಪ್ರೌಢಶಾಲಾ ಆವರಣದಲ್ಲಿ ಪೋಲಿಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿದ್ದ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಕಾರ್ಯಕ್ರಮ ಉದ್ಘಾಟಿಸಿದರು.
ಇದು ಸರಕಾರಿ ಕಾರ್ಯಕ್ರಮವಾಗಿರುವುದರಿಂದ ಬಿಸಿನೀರು ಮುದ್ದಪ್ಪ. ಹೆಗ್ಗೆರೆ ತಾಯಮ್ಮ ಹಾಗೂ ಆದರ್ಶ ಪ್ರೌಢ ಶಾಲೆಗಳು ಆಯ್ಕೆಯಾಗಿದ್ದು ಎನ್ ಎಸ್ ಎಸ್ ಸ್ಕೌಟ್ ತರಬೇರಿಯಂತೆ ವಿದ್ಯಾರ್ಥಿ ಪೊಲೀಸ್ ಕೆಡೆಟ್ ಕಾರ್ಯಕ್ರಮದಲ್ಲಿ ಶಾಲಾ ಚಟುವಟಿಕೆಗಳೊಂದಿಗೆ ಹೆಚ್ಚಿನ ಹೊರೆಯಾಗದಂತೆ ಜನಸ್ನೇಹಿ ಪೊಲೀಸ್ ಆಡಳಿತ ವ್ಯವಸ್ಥೆ ಹಾಗೂ ಸರ್ಕಾರದ ವಿವಿಧ ಇಲಾಖೆಯ ಕಾರ್ಯಕ್ರಮಗಳ ಕುರಿಂತೆ ವಿದ್ಯಾರ್ಥಿಗಳಿಗೆ ಪರಿಚಯಿಸಲಾಗುವುದು. ವಾರಾಂತ್ಯದಲ್ಲಿ ಅರ್ಧ ದಿನ ಒಳಾಂಗಣ ಹಾಗೂ ತಿಂಗಳಲ್ಲಿ ಎರಡು ದಿನ ಹೊರಾಂಗಣ ಕಾರ್ಯಕ್ರಮ ಆಯೋಜಿಸಿ ಮಾಹಿತಿ ನೀಡಲಾಗುವುದು ಎಂದರು.
ವೃತ್ತ ನಿರೀಕ್ಷಕ ಸಮೀವುಲ್ಲ ಮಾತನಾಡಿ ತರಬೇತಿಯಲ್ಲಿ ವಿದ್ಯಾರ್ಥಿಗಳಿಗೆ ಶಿಸ್ತು. ಅಪರಾದ ತಡೆ. ತಂದೆ ತಾಯಿ.ಗುರು ಹಿರಿಯರಿಗೆ ಗೌರವ ಕೊಡುವ ಪೋಲಿಸ್ ಇಲಾಖೆಯ ಕರ್ತವ್ಯಗಳ ಬಗ್ಗೆ ಒಳಾಂಗಣ ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಕಾನೂನು ಅರಿವು, ಸಾಮಾಜಿಕ ಜಾಲತಾಣ, ಸೈಬರ್ ಕ್ರೈಂ, ನಾರ್ಕೋಟಿಕ್ ಡ್ರಗ್ಸ್, ಫೋಕ್ಸೋ ಬಗ್ಗೆ ಜಾಗೃತಿ ಮೂಡಿಸಲಾಗುವುದು.
ಹೊರಾಂಗಣ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ, ನ್ಯಾಯಾಲಯ, ತಹಶೀಲ್ದಾರ್ ಕಚೇರಿ ಹಾಗೂ ಕಾರಾಗೃಹಕ್ಕೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಿ ಅಲ್ಲಿನ ವ್ಯವಸ್ಥೆ ಹಾಗೂ ಕಾರ್ಯವೈಖರಿಯನ್ನು ಪರಿಚಯಿಸಲಾಗುವುದು.
ಇದರೊಂದಿಗೆ ಯೋಗಾ ತರಬೇತುದಾರರಿಂದ ಪ್ರಾಥಮಿಕ ಯೋಗದ ಕ್ರಮಗಳ ಕುರಿತು ಮಾಹಿತಿ ನೀಡಲಾಗುವುದು ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್, ಪಿಎಸ್ಐ ಸತೀಶ್ ನಾಯ್ಕ, ಬಸವರಾಜ್, ಮುಖ್ಯಶಿಕ್ಷಕ ಮಂಜುನಾಥರೆಡ್ಡಿ, ಸಹಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.