ಚಳ್ಳಕೆರೆ: ತಾಲ್ಲೂಕಿನ ಎನ್. ದೇವರಹಳ್ಳಿ ಗ್ರಾಮದಲ್ಲಿ ಡಿ.06 ರಿಂದ ಆರಂಭವಾಗುವ ದಡ್ಲ ಮಾರಮ್ಮ ಪೂಜಾರಿ ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರು ಭಾಗವಹಿಸುವಂತೆ ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ ಮನವಿ ಮಾಡಿದ್ದಾರೆ.
ನಾಯಕನಹಟ್ಟಿ ಪಟ್ಟಣದಲ್ಲಿ ಮಾತನಾಡಿ ಎನ್. ದೇವರಹಳ್ಳಿಯಲ್ಲಿ ನೆಲಿಸಿರುವ ದಡ್ಲ ಮಾರಮ್ಮ ದೇವಾಲದ ಪೂಜಾರಿಗೆ ಪಟ್ಟಾಭಿಷೇಕ ಮಾಡುವ ಕಾರ್ಯಕ್ರಮದ ಅಂಗವಾಗಿ ವಿಶೇಷವಾಗಿ ಸಂಪ್ರದಾಯದAತೆ ವಿಶೇಷ ಆಚರಣೆಗಳು ನಡೆಯಲಿವೆ. ಮೊಳಕಾಲ್ಮೂರು ಕ್ಷೇತ್ರದ ಮ್ಯಾಸನಾಯಕ ಜನಾಂಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪಟ್ಟಾಭಿಷೇಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.