ಚಳ್ಳಕೆರೆ : ಜಗತ್ತಿನಲ್ಲಿ ಪ್ರತಿಯೊಬ್ಬರಿಗೂ ಮಾನವ ಹಕ್ಕುಗಳು ಹಾಗೂ ಎಲ್ಲಾ ವರ್ಗಕ್ಕೂ ದೊರೆಯುವಂತಾಗಬೇಕು ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದ್ದಾರೆ.
ಅವರು ನಗರದ ಅಂಬೇಡ್ಕರ್ ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿ ನಿಯದಲ್ಲಿ ದಲಿತ ಸಂಘರ್ಷ ಸಮಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಮಾನಹ ಹಕ್ಕುಗಳ ದಿನಾಚರಣೆ ಕಾರ್ಯಕ್ರದಮಲ್ಲಿ ಗಿಡಕ್ಕೆ ನೀರೆಯುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು, ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಆಶಯದಂತೆ ಪ್ರತಿಯೊಬ್ಬ ಜೀವಿಯು ಕೂಡ ಯಾವುದೇ ಹಕ್ಕುಗಳಿಂದ ವಂಚಿತರಾಗಬಾರದು. ಯಾವುದೇ ಜಾತಿ ಮತ ಧರ್ಮದ ಭೇದವಿಲ್ಲದೆ ಈ ಹಕ್ಕನ್ನು ಪಡೆಯಬಹುದಾಗಿದೆ. ಪ್ರತಿಯೊಬ್ಬರು ಮಾನವ ಹಕ್ಕಿನ ಬಗ್ಗೆ ತಿಳಿದುಕೊಳ್ಳುವುದು ಮುಖ್ಯವಾಗಿದೆ, ವಿದ್ಯಾರ್ಥಿಗಳು ಸಂವಿಧಾನದಲ್ಲಿರುವ ಹಕ್ಕುಗಳ ಬಗ್ಗೆ ತಿಳಿದುಕೊಂಡು ಅನಕ್ಷರಸ್ಕರಿಗೂ ಸಹ ಅರಿವು ಮೂಡಿಸುವ ಗುರುತರ ಜವಾಬ್ದಾರಿಯನ್ನು ಹೊಂದಬೇಕು ಎಂದು ತಿಳಿಸಿದರು.
ಇದೇ ಸಂಧರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆಎಸ್.ಸುರೇಶ್ ಮಾತನಾಡಿ ಪ್ರತಿಯೊಬ್ಬ ಜೀವಿಗೂ ಬದುಕುವ ಹಕ್ಕಿದೆ ಅಧಿಕಾರ ಹಣ ಹಾಗೂ ಶ್ರೇಷ್ಠತೆಗೋಸ್ಕರ ಹಿಂತಿಸುವAತಹ ಪ್ರವೃತ್ತಿ ಬೆಳಸಿಕೊಳ್ಳುತ್ತಿದ್ದರೆ. ನಾವೇ ಶ್ರೇಷ್ಠರು ಎಂಬ ಮನೋಭಾವನೆ ಬೆಳಸಿಕೊಳ್ಳುತ್ತಿದ್ದಾರೆ. ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳಕೊಳ್ಳುವ ಹುನ್ನಾರ ಕೆಲವು ಪಟ್ಟಭದ್ರಾ ಹಿತಾಸಕ್ತಿಗಳು ಮಾಡುತ್ತಿವೆ ಇದರ ವಿರುದ್ಧ ಅನೇಕ ಮಹನೀಯರು ತಮ್ಮ ತ್ಯಾಗ ಬಲಿದಾನದ ಮೂಲಕ ಹೋರಾಡಿದ್ದಾರೆ. ಅವರ ಆದರ್ಶಗಳನ್ನು ಪಾಲಿಸುವ ಮೂಲಕ ದ್ವೇಷಿಸುವ ಮನೋಭಾವ ಕೈ ಬಿಟ್ಟು ಎಲ್ಲರೂ ಒಂದಾಗಿ ಸಮಾನತೆಯಿಂದ ಬದುಕುವ ಸಾಮರಸ್ಯ ಜೀವನಕ್ಕೆ ನಾಂದಿ ಹಾಡಬೇಕಿದೆ ಎಂದರು.
ಇನ್ನೂ ನಗರಸಭೆ ಪೌರಾಯುಕ್ತ ಸಿ.ಚಂದ್ರಪ್ಪ ಮಾತನಾಡಿ ಅಮೇರಿಕಾ ದಕ್ಷಿಣ ಆಫ್ರಿಕಾ ದೇಶಗಳಲ್ಲಿನ ಅಸ್ಪೃಶ್ಯತೆಯನ್ನು ಮನಗಂಡು ಅಂಬೇಡ್ಕರ್ ಮಾನವ ಹಕ್ಕುಗಳ ಬಗ್ಗೆ ವಿಸ್ತ್ರತವಾಗಿ ಅಧ್ಯಯನ ಕೈಗೊಂಡು ನಮ್ಮ ದೇಶದ ಸಂವಿಧಾನಕ್ಕೆ ಅಳವಡಿಸಿ ಎಲ್ಲರಿಗೂ ದೊರೆಯುವಂತೆ ಮಾಡಿದ್ದಾರೆ ಎಂದು ಸ್ಮರಿಸಿದರು.
ಇದೇ ಸಂಧರ್ಭದಲ್ಲಿ ಸಮಾಕ ಕಲ್ಯಾಣ ಇಲಾಖೆಯ ಮ್ಯಾನೇಜರ್ ದಯಾನಂದ್, ದಲಿತ ಮುಖಂಡ ಪ್ರಕಾಶ್, ಮಾಜಿ ತಾಪಂ.ಸ್ಥಾಮಿ ಸಮಿತಿ ಅದ್ಯಕ್ಷ ಹೆಚ್.ಸಮರ್ಥರಾಯ್, ಮಾಜಿ ನಗರಸಭೆ ಉಪಾಧ್ಯಕ್ಷ ಟಿ.ವಿಜಯ್ ಕುಮಾರ್, ಶ್ರೀನಿವಾಸ್, ಭೀಮಣ್ಣ, ವಿನೋಧ್ ಕುಮಾರ್, ವಾರ್ಡ್ನ್ ಆಶಾರಾಣಿ,ಇತರರು ಪಾಳ್ಗೊಂಡಿದ್ದರು.