ಚಳ್ಳಕೆರೆ : 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ವರ್ಷದ ಅಂಗವಾಗಿ, ಚಳ್ಳಕೆರೆ ತಾಲೂಕಿನ ಯಲಗಟ್ಟೆ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದ ರಾಷ್ಟ್ರೀಯ ಹವಾಮಾನ ವೈಪರೀತ್ಯ ಸರಣೆ ಕೃಷಿ ಯೋಜನೆ ಉದ್ಘಾಟನೆ ಮತ್ತು ವಿವಿಧ ಬೆಳೆ ಪದ್ಧತಿಗಳ ಪ್ರಾತ್ಯಕ್ಷಿಕೆಯ ಕ್ಷೇತ್ರೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಪಾಲ್ಗೊಂಡು ಉದ್ಘಾಟನೆ ನೆರವೆರಿಸಿ ಮಾತನಾಡಿದ ಅವರು ಇಂದಿನ ಆಧುನಿಕ ಬರಾಟೆಯಲ್ಲಿ ರೈತರು ಸಾಂಪ್ರದಾಯಿಕ ಬೆಳೆಗಳನ್ನು ಹಾಕುವ ಬದಲಾಗಿ ತಂತ್ರಜ್ಞಾನ ಬಳಸಿಕೊಂಡು ಆರ್ಥಿಕ ಲಾಭ ಬರುವ ವಾಣಿಜ್ಯ ಬೆಳೆಗಳನ್ನು ಬೆಳೆದು ಆರ್ಥಿಕವಾಗಿ ಮುಂದೆ ಬರಬೇಕು ಎಂದು ಕಿವಿ ಮಾತು ಹೇಳಿದರು.
ಈ ಸಂಧರ್ಭದಲ್ಲಿ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ಐ.ಸಿ.ಎ.ಆರ್. ಕೃಷಿ ವಿಜ್ಞಾನ ಕೇಂದ್ರ, ಹಾಗೂ ವಿಸ್ತರಣಾ ನಿರ್ದೇಶಕ ಡಾಕ್ಟರ್ ಬಿ ಹೇಮಲ್ಲಾನಾಯ್ಕ, ನೋಡಲ್ ಅಧಿಕಾರಿ ಡಿವಿಎಸ್ ರೆಡ್ಡಿ, ವೇದವತಿ ಕೃಷಿಕರ ಸಂಘದ ಅಧ್ಯಕ್ಷ ಕೆ.ಮಂಜಪ್ಪ, ನಿರ್ದೇಶಕರಾದ ರಮೇಶ್ ಕುಮಾರ್, ಬಬೂರ್ ಫಾರಂ ಸಹ ಸಂಯೋಧನ ನಿರ್ದೇಶಕ ಶರಣಪ್ಪ ಜಕ್ಕಂಡಿ, ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಓಕುಮಾರ್, ಉಪನಿರ್ದೇಶಕ ಸವಿತಾ, ಉಪ ನಿರ್ದೇಶಕರು ಶಿವಕುಮಾರ್, ಹಿರಿಯ ಸಹಾಯಕ ತೋಟಗಾರಿಕೆ ಸಹಾಯಕ ಕೃಷಿ ನಿರ್ದೇಶಕ ಆರ್.ವಿರುಪಾಕ್ಷಪ್ಪ, ಸಹಾಯಕ ಕೃಷಿ ನಿರ್ದೇಶಕರಾದ ಅಶೋಕ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀದೇವಿ, ಉಪಾಧ್ಯಕ್ಷೆÀ ಮಂಜಮ್ಮ, ಗ್ರಾಮ ಪಂಚಾಯತ್ ಸದಸ್ಯರಾದ ಕಾಟಮ್ಮ, ಶ್ರೀನಿವಾಸ್, ತಿಪ್ಪೇಸ್ವಾಮಿ, ಕೆ ತಿಪ್ಪೇಸ್ವಾಮಿ, ರಾಜಪ್ಪ, ಮುಖಂಡರುಗಳಾದ ವೀರೇಶ್, ಹೇಮಣ್ಣ, ಮುಖಂಡರು ಮತ್ತು ಸಾರ್ವಜನಿಕರು ಹಾಗೂ ರೈತರು ಉಪಸ್ಥಿತರಿದ್ದರು.