ಚಳ್ಳಕೆರೆ : ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಸದೃಢರಾಗಲು ಜ್ಞಾನವಿಕಾಸ ಕಾರ್ಯಕ್ರಮದಿಂದ ಮಾತ್ರ ಸಾಧ್ಯ ಎಂದು ಅನ್ನಪೂರ್ಣ ಹೇಳಿದ್ದಾರೆ .
ಅವರು ನಾಯಕನಹಟ್ಟಿ ಪಟ್ಟಣದ ಶ್ರೀ ಈಶ್ವರ ದೇವಾಲಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ಮಹಿಳಾ ಜ್ಞಾನವಿಕಾಸ ಹಾಗೂ ಸೃಷ್ಟಿ ಜ್ಞಾನವಿಕಾಸ 8ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ದೀಪ ಬೆಳಗುವುದರ ಮುಖಾಂತರ ಉದ್ಘಾಟಿಸಿ ಚಾಲನೆ ನೀಡಿ ಮಾತನಾಡಿದ್ದಾರೆ.
ಕುಟುಂಬದ ನಾಲ್ಕು ಗೋಡೆಗಳ ಮಧ್ಯೆ ಮಹಿಳೆಯರು ಜೀವಿಸುವುದು ತುಂಬಾ ಕಷ್ಟದ ಪರಿಸ್ಥಿತಿ ಆದ್ದರಿಂದ ಮಹಿಳೆಯರು ಕುಟುಂಬದ ಜೊತೆ ಜೊತೆಯಲ್ಲೇ ಆರ್ಥಿಕವಾಗಿ ಸಾಮಾಜಿಕವಾಗಿ ಸದೃಢರಾಗಲು ಮುಖ್ಯ ವಾಹಿನಿಗೆ ಬರಲು ಪ್ರತಿಯೊಬ್ಬರು ಮುಂದಾಗಬೇಕು ಎಂದು ತಿಳಿಸಿದರು.
ಆಪ್ತಸಮಾಲೋಚಕರು ಸುಧಾ ಮಾತನಾಡಿ ಮಹಿಳೆಯರಿಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಂತರಾಗಿರಲು ಮಹಿಳೆಯರಿಗೆ ಆರೋಗ್ಯದ ಬಗ್ಗೆ ಮಾಹಿತಿ ತಿಳಿಸಿದರು.
ನಂತರ ಮೊಳಕಾಲ್ಮೂರು ಜ್ಞಾನವಿಕಾಸ ಸಮನ್ವಯಾಧಿಕಾರಿ ಅಂಬಿಕ ರವರು ಮಾತನಾಡಿ ಮಹಿಳೆಯರಿಗೆ ಜ್ಞಾನವಿಕಾಸ ಕಾರ್ಯಕ್ರಮ ಅತ್ಯಂತ ಮುಖ್ಯವಾದ ಕಾರ್ಯಕ್ರಮ ಸಂಘವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಸಂಘದ ಸರ್ವ ಸದಸ್ಯರು ಕಂಕಣಭದ್ಧರಾಗಿರಬೇಕು ಶ್ರೀ ಶ್ರೀ ಮಂಜುನಾಥೇಶ್ವರ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪತ್ರಕರ್ತ ಕೆಟಿ.ಓಬಳೇಶ್, ಮೇಲ್ವಿಚಾರಕರಾದ ಸಂತೋಷ್, ನಾಯಕನಹಟ್ಟಿ ಜ್ಞಾನವಿಕಾಸ ಸಮನ್ವಯಧಿಕಾರಿ ಹೇಮಲತಾ, ಸೇವಾಪ್ರತಿನಿಧಿ ಜ್ಯೋತಿ ಮತ್ತು ಶೋಭಾ, ಸೃಷ್ಟಿ ಜ್ಞಾನವಿಕಾಸ ಕೇಂದ್ರದ ಸದಸ್ಯರು ಮತ್ತು ಸಿಂಚನ ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಭಾಗವಹಿಸಿದ್ದರು