ಚಳ್ಳಕೆರೆ : ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗಲೆ ರಾಜಕೀಯ ಕಣ ರಂಗೇರಿದೆ, ಆದರಂತೆ ಪುಲ್ ಆಕ್ಟಿವ್ ಆದ ಜೆಡಿಎಸ್ ಪಕ್ಷ ಕಳೆದ 2018ರ ಚುನಾವಣೆಯಲ್ಲಿ ಸೊಲನುಂಡು ಈ ಬಾರಿ ಗೆಲುವಿನ ನಗೆ ಬಿರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.
ಅದರಂತೆ ಚಳ್ಳಕೆರೆ ಕ್ಷೇತ್ರದಲ್ಲಿ ಪ್ರತಿ ಗ್ರಾಮದಲ್ಲಿ ಬೀಡು ಬಿಟ್ಟ ಜೆಡಿಎಸ್ ಕಾರ್ಯಕರ್ತರು, ಎರಡು ರಾಷ್ಟಿçÃಯ ಪಕ್ಷಗಳನ್ನು ಬದಿಗೊತ್ತಿ ಪ್ರಾದೇಶಿಕ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಲು ವಾರ್ಡ್ವಾರು ಸಾರ್ವಜನಿಕ ಸಭೆ ಮಾಡುವ ಮೂಲಕ ರಾಜ್ಯದಲ್ಲಿ ಮತ್ತು ಕ್ಷೇತ್ರದಲ್ಲಿ ಜೆಡಿಎಸ್ ಅಧಿಕಾರಕ್ಕೆ ತರಲು ಶತಪ್ರಯತ್ನ ಮಾಡುತ್ತಿದ್ದಾರೆ.
ಇನ್ನು ಚಿತ್ರದುರ್ಗ ಜಿಲ್ಲೆಯಲ್ಲೆ ಎರಡನೇ ದೊಡ್ಡ ಮತಕ್ಷೇತ್ರವಾದ ಚಳ್ಳಕೆರೆಯಲ್ಲಿ ಕಳೆದ ಎರಡು ವರ್ಷಗಳ ಅಧಿಕಾರದಲ್ಲಿ ಇರುವ ಕಾಂಗ್ರೇಸ್ ಪಕ್ಷಕ್ಕೆ ಸೆಡ್ಡು ಒಡೆದು ಈ ಬಾರಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ತರಲು ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ಪ್ರಚಾರದಲ್ಲಿ ತೊಡಗಿದ್ದಾರೆ.
ಅದರಂತೆ ಚಳ್ಳಕೆರೆ ವಿಧಾನಸಭಾ ಮತಕ್ಷೇತ್ರದ ತುರುವನೂರು ಹೋಬಳಿಯ ಕೂನುಬೇವು ಗ್ರಾಮದ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ್, ದಳವಾಯಿ, ಬಸಣ್ಣ, ಹೋಟೆಲ್‌ಹೇಮಣ್ಣ, ಜೆಡಿಎಸ್ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಸ್ವಾಗತ ಕೋರಿದ್ದಾರೆ.
ಇನ್ನೂ ಜೆಡಿಎಸ್ ಪಕ್ಷದ ಅಭ್ಯರ್ಥಿ ಎಂ.ರವೀಶ್ ಕುಮಾರ್, ತಾಲೂಕು ಅಧ್ಯಕ್ಷ ಪಿ.ತಿಪ್ಪೇಸ್ವಾಮಿ,ನಗರಸಭೆ ಸದಸ್ಯ ವಿ.ವೈ.ಪ್ರಮೋದ್, ಮುಖಂಡರಾದ ಹೆಗ್ಗೆರೆ ಆನಂದಪ್ಪ, ಹನುಮಂತಚಾರ್, ಶ್ರೀಧರಾಚಾರ್, ಬಳಗಟ್ಟ ಅಶೋಕ್ ಉಪಸ್ಥಿತರಿದ್ದರು