ನಾಯಕನಹಟ್ಟಿ:: ಕೋಟಿ ನಾಡಿನಲ್ಲಿ ಜನವರಿ 8 ನೇ ತಾರೀಖಿನಂದು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಐಕ್ಯತೆ ಸಮಾವೇಶವನ್ನು ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಳ್ಳಲಾಗಿದೆ ಎಂದು ಪರಿಶಿಷ್ಟ ಜಾತಿಯ ವಿಭಾಗದ ಜಿಲ್ಲಾಧ್ಯಕ್ಷ ಎಸ್ ಜಯಣ್ಣ ಹೇಳಿದ್ದಾರೆ.
ಪಟ್ಟಣದ ಪ್ರವಾಸ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರು ಅತಿ ಹೆಚ್ಚಾಗಿದ್ದು ಜನವರಿ 8ನೇ ತಾರೀಖಿನಂದು ಕಾಂಗ್ರೆಸ್ ಪಕ್ಷದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬೃಹತ್ ಐಕ್ಯತೆ ಸಮಾವೇಶವನ್ನು ಏರ್ಪಡಿಸುವಂತೆ ರಾಜ್ಯ ನಾಯಕರಾದ ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ, ಡಾ ಪರಮೇಶ್ವರ್ ಜಿಲ್ಲೆಯ ಶಾಸಕರಾದ ಟಿ ರಘುಮೂರ್ತಿ ಡಿ ಸುಧಾಕರ್ ಹನುಮಲಿ ಷಣ್ಮುಖಪ್ಪ, ಎಸ್ ತಿಪ್ಪೇಸ್ವಾಮಿ ಯೋಗೇಶ್ ಬಾಬು ಸೇರಿದಂತೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಬೃಹತ್ ಐಕ್ಯತೆ ಸಮಾವೇಶದ ಪೂರ್ವಭಾವಿ ಸಭೆಯನ್ನು ನಡೆಸಿದ್ದು.
ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಪರಿಚಿತ ಜಾತಿ ಪರಿಶಿಷ್ಟ ಪಂಗಡದ ಸಮುದಾಯದವರು ಈ ಒಂದು ಕಾರ್ಯಕ್ರಮಕ್ಕೆ ಬಂದು ಹಬ್ಬದ ರೀತಿಯಲ್ಲಿ ಐಕ್ಯತೆ ಸಮಾವೇಶವಲ್ಲ ಯಶಸ್ವಿಗೊಳಿಸಬೇಕು ಎಂದು ಪರಿಶಿಷ್ಟ ಜಾತಿಯ ವಿಭಾಗದ ಜಿಲ್ಲಾಧ್ಯಕ್ಷ ಎಸ್ ಜಯಣ್ಣ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪರಿಶಿಷ್ಟ ಜಾತಿಯ ರಾಜ್ಯ ಸಂಚಾಲಕ ಹಿರೇಹಳ್ಳಿ ಮಲ್ಲೇಶ್ ಮಾತನಾಡಿ ವಿಧಾನಸಭಾ ಚುನಾವಣೆ ಇನ್ನು ಕೇವಲ ಎರಡು ಮೂರು ತಿಂಗಳ ಬಾಕಿ ಇದ್ದು ಪರಿಶಿಷ್ಟ ಜಾತಿಯ ಎಲ್ಲಾ ಕಾಲೋನಿಗಳಲ್ಲಿರುವ ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತಂದು ಪಕ್ಷದ ಸಾಧನೆಗಳ ಬಗ್ಗೆ ತಿಳಿಸಿ ಕಾಂಗ್ರೆಸ್ ಪಕ್ಷಕ್ಕೆ ಒತ್ತನ್ನು ನೀಡಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿ ಕೊಳ್ಳಬೇಕು ಈ ಬಾರಿ ಕಾಂಗ್ರೆಸ್ ಪಕ್ಷದ ನಮ್ಮ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಯಾರಿಗೆ ಟಿಕಿಟ್ ನೀಡಲಿ ಪಕ್ಷದ ಪರ ಕೆಲಸ ಮಾಡಬೇಕು ವ್ಯಕ್ತಿಯ ಪರ ಅಲ್ಲ ಜಿಲ್ಲಾ ಮಟ್ಟದಲ್ಲಿ ತಾಲೂಕು ಮಟ್ಟದಲ್ಲಿ ಮತ್ತು ಹೋಬಳಿ ಮಟ್ಟಗಳಲ್ಲಿ ಹೆಚ್ಚಿನದಾಗಿ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಬಲಪಡಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದರು.
ಪರಿಶಿಷ್ಟ ಜಾತಿ ವಿಭಾಗದ ತಳಕು ಮತ್ತು ನಾಯಕನಹಟ್ಟಿ ಬ್ಲಾಕ್ ಅಧ್ಯಕ್ಷ ಆರ್ ಬಸವರಾಜ್ ಮಾತನಾಡಿದರು.
ಈ ಸಂದರ್ಭದಲ್ಲಿ ಮುಖಂಡ ಎಂಎಲ್ಎ ಪಾಪಣ್ಣ, ಅಶ್ವಿನಿ ಯಾದವ್, ಜಿಲ್ಲಾ ಬೋವಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್, ಪರಿಶಿಷ್ಟ ಜಾತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದುರುಗೇಶ್, ಒಬಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಜಗದೀಶ್, ಗ್ರಾಮ ಪಂಚಾಯತಿ ಸದಸ್ಯರಾದ ರಾಜಪ್ರಭುತ್ವದ, ಓಬಳೇಶ್, ಗಜ್ಜುಗಾನಹಳ್ಳಿ ಜಿ ಬಿ ತಿಪ್ಪೇಸ್ವಾಮಿ, ಚಂದ್ರಪ್ಪ ಜಾಗನೂರಹಟ್ಟಿ ಮುತ್ತಯ್ಯ, ಬಿ ತಿಪ್ಪೇಸ್ವಾಮಿ, ಜಿ ಟಿ ಪ್ರಹ್ಲಾದ್, ಜಿ ಶಿವರಾಜ್, ಸೋಶಿಯಲ್ ಮೀಡಿಯಾ ಮಧು ಇತರರಿದ್ದರು