ಜಲಜೀವನ್ ಮಿಷನ್ ಯೋಜನೆಯಲ್ಲಿ ಪ್ರತಿ ಮನೆಗೆ ಕುಡಿಯುವ ನೀರು : ಸಿಇಓ.ಎಂ.ಎಸ್.ದಿವಾಕರ್
ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಭಾಗಂಣದಲ್ಲಿ ಜಿಲ್ಲಾ ಜಲಜೀವನ್ ಮಿಷನ್ ಯೋಜನೆಗೆ ಸಂಬAದಿಸಿದ ಸಭೆಯನ್ನು ಚಿತ್ರದುರ್ಗ ವಿಧಾನಸಭೆ ಕ್ಷೇತ್ರದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಜೊತೆಗೆ ಕ್ಷೇತ್ರದ ವ್ಯಾಪ್ತಿಗೆ ಬರುವ ಜಲಜೀವನ್ ಮಿಷನ್ ಅಡಿಯಲ್ಲಿ ಕುಡಿಯುವ ನೀರಿನ ಬಗ್ಗೆ ಸಭೆ ನಡೆಸಿದರು.
ನಂತರ ಸಂಪನ್ಮೂಲ ಕೇಂದ್ರದಲ್ಲಿ ಸ್ವ ಸಹಾಯ ಗುಂಪಿನ ಸದಸ್ಯರಿಗೆ ಆಯೋಜಿಸಿರುವ ಘನ ತ್ಯಾಜ್ಯ ನಿರ್ವಹಣೆ ಮತ್ತು ಕಾರ್ಯಾಚರಣೆ ಕುರಿತು ತರಬೇತಿ ಕಾರ್ಯಗಾರದಲ್ಲಿ ಇಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ್ ಭೇಟಿ ನೀಡಿ ಸ್ವ -ಸಹಾಯ ಗುಂಪಿನ ಮಹಿಳೆಯರ ಜೊತೆಗೆ ಘನ ತ್ಯಾಜ್ಯ ನಿರ್ವಹಣೆ ಬಗ್ಗೆ ಉಪನ್ಯಾಸ ನೀಡಿ, ಕೆಲ ಕಾಲ ಚರ್ಚಿಸಿದರು.
ಈ ಸಭೆಯಲ್ಲಿ ಸಂಬAಧಿಸಿದ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.