ಚಳ್ಳಕೆರೆ : ಚಳ್ಳಕೆರೆ ನಗರದ ಬಿಸಿನೀರು ಮುದ್ದಪ್ಪ ಪ್ರೌಢಶಾಲಾ ಆವರಣದಲ್ಲಿ ನಡೆದ ಭೀಮಾ ಕೋರೆಗಾಂವ್ ವಿಜಯೋತ್ಸವದ ಅಂಗವಾಗಿ ಕ್ಷೇತ್ರದ ಶಾಸಕರಾದ ಟಿ.ರಘುಮೂರ್ತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿಜಯೋತ್ಸವ ಸ್ತಂಭವನ್ನು ಉದ್ಘಾಟಿಸಿ ನಂತರ ಮಾತನಾಡಿದ ಅವರು, ಪೇಶ್ವೆ- ಮೇಲ್ಜಾತಿ ದಬ್ಬಾಳಿಕೆಯ ವಿರುದ್ಧ ದಲಿತರ ಸ್ವಾಭಿಮಾನಕ್ಕಾಗಿ ನಡೆದ ಭೀಮಾ ಕೋರೆಗಾಂವ್ ಕದನದಲ್ಲಿ ವಿಜಯ ಸಾಧಿಸಿದ ದಿನದ ಅಂಗವಾಗಿ, ಚಳ್ಳಕೆರೆ ಸಾಮಾಜಿಕ ಸಂಘರ್ಷ ಸಮಿತಿ ಆಯೋಜಿಸಿದ್ದ ಭೀಮಾ ಕೋರೆಂಗಾವ್ ವಿಜಯೋತ್ಸವ ಅರ್ಥವತ್ತಾಗಿದೆ ಎಂದು ನೆನೆದರು.
ನಂತರ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಸ್ಮರಿಸಿ, ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಸುಮಕ್ಕ ಅಂಜಿನಪ್ಪ, ನಗರಸಭೆ ಸದಸ್ಯರಾದ ವೀರಭದ್ರಯ್ಯ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರಕಾಶ್‌ಮೂರ್ತಿ, ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷರಾದ ಉಮೇಶ್‌ಬ್ಯಾನರ್ಜಿ ಮುಖಂಡರುಗಳಾದ ಕೃಷ್ಣಮೂರ್ತಿ, ಬಸವರಾಜ್, ವಿಜಯಕುಮಾರ, ಮುತ್ತುರಾಜ್, ದ್ಯಾಮಣ್ಣ, ಭೀಮನಕೆರೆ ಶಿವಮೂರ್ತಿ, ವೀರಭದ್ರಪ್ಪ, ಅಂಜಿನಪ್ಪ, ವಿನೋದ್ ಕುಮಾರ್, ವಿಶ್ವಕರ್ಮ ರಾಜ್ಯ ಅಧ್ಯಕ್ಷರಾದ ಪ್ರಸನ್ನ ಕುಮಾರ್, ಮುಖಂಡರು ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!