ಚಳ್ಳಕೆರೆ : ಚಿತ್ರದುರ್ಗ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾದ ಸಾಹಿತಿ ತಿಪ್ಪಣ್ಣ ಮರಿಕುಂಟೆಯವರನ್ನು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ರಘುಮೂರ್ತಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.
ಚಳ್ಳಕೆರೆ ಶಾಸಕರ ಭವನದಲ್ಲಿ ಸಾಹಿತಿಗಳಿಗೆ ಗೌರವ ಸಮರ್ಪಣೆ ಮಾಡಿ ಮಾತನಾಡಿದರು ಅವರು ನಮ್ಮ ನೆಲದಲ್ಲಿ ಜನರಿಸಿದ ತಿಮ್ಮಣ್ಣ ಮರಿಕುಂಟೆ ಸರಳ ಜೀವನ ನಡೆಸುತ್ತ ಈಡೀ ಸಾಹಿತ್ಯ ವಲಯದಲ್ಲಿ ತಮ್ಮದೇ ಆದ ಚಾಪು ಮೂಡಿಸುವ ಮೂಲಕ ಈಡೀ ಸಾಹಿತ್ಯ ಲೋಕದಲ್ಲಿ ಅಗ್ರಗಣ್ಯರಾಗಿದ್ದಾರೆ, ಇಂತಹ ವ್ಯಕ್ತಿಗಳು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೆಳನಕ್ಕೆ ಆಯ್ಕೆಯಾಗಿರುವುದು ಈ ಗಡಿ ಭಾಗದ ಜನತೆಗೆ ಸಂತಸ ತಂದಿದೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರಕಾಶ್‌ಮೂರ್ತಿ, ಮುಖಂಡರುಗಳಾದ ಸೈಯದ್, ರಾಜಪ್ಪ, ಬಸವರಾಜ್, ಮಂಜುನಾಥ್, ಚಂದ್ರಪ್ಪ, ಮಹಾಂತೇಶ್, ತಿಪ್ಪೇಸ್ವಾಮಿ, ರುದ್ರೇಶ್, ದೊಡ್ಡ ರಂಗಪ್ಪ, ನಾಗರಾಜ್, ಮುಖಂಡರು ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.