ಚಳ್ಳಕೆರೆ : ಜ.8 ರಂದು ಚಿತ್ರದುರ್ಗ ನಗರದಲ್ಲಿ ನಡೆಯುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಐಕ್ಯತಾ ಸಮಾವೇಶದ ಲಾಂಛನವನ್ನು ಕಾಂಗ್ರೇಶ್ ಪಕ್ಷದ ವರಿಷ್ಠರು ಬಿಡುಗಡೆ ಮಾಡಿದರು.
ಮಧ್ಯ ಕರ್ನಾಟಕ ಭಾಗದಲ್ಲಿ ನಡೆಯುವ ಇದೇ ಜನವರಿ 8ರಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಐಕ್ಯತಾ ಸಮಾವೇಶ ನಡೆಯಲಿದ್ದು ಇದರ ಪ್ರಯುಕ್ತ ಕಾಂಗ್ರೆಸ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಐಕ್ಯತಾ ಸಮಾವೇಶದ ಲಾಂಛನ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸ್ವಾಗತ ಸಮಿತಿ ಅಧ್ಯಕ್ಷರಾದ ಎಚ್.ಸಿ.ಮಹಾದೇವಪ್ಪ, ವೇದಿಕೆ ಸಮಿತಿಯ ಅಧ್ಯಕ್ಷರಾದ ಎಚ್.ಆಂಜನೇಯ, ಸಮನ್ವಯ ಸಮಿತಿ ಸಂಚಾಲಕರಾದ ಬಿ.ಎನ್.ಚಂದ್ರಪ್ಪ, ಶಾಸಕರಾದ ಟಿ.ರಘುಮೂರ್ತಿ, ರಾಜ್ಯಸಭಾ ಮಾಜಿ ಸದಸ್ಯರಾದ ಹನುಮಂತಪ್ಪ, ಮಾಜಿ ಶಾಸಕರಾದ ಎಸ್.ಕೆ.ಬಸವರಾಜನ್, ವಿಧಾನಪರಿಷತ್ತು ಮಾಜಿ ಸದಸ್ಯರಾದ ರಘುಆಚಾರ್, ಕಾಂಗ್ರೆಸ್ ಮುಖಂಡರಾದ ಹನುಮಲಿ ಷಣ್ಮುಖಪ್ಪ, ಬಿ.ಸೋಮಶೇಖರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಕೆ.ತಾಜ್ ಪೀರ್ ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!