ಚಳ್ಳಕೆರೆ : ಗ್ರಾಮೀಣ ಜನರು ಎಲ್ಲೆಂದರಲ್ಲಿ ಕಸ ಬಿಸಾಡುವುದು ತಪ್ಪಬೇಕು, ಜನರು ಘನ ಮತ್ತು ದ್ರವ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುತ್ತಾರೆ. ಇದರಿಂದ ಗ್ರಾಮಗಳಲ್ಲಿ ಉಂಟಾಗುತ್ತಿರುವ ಅನೈರ್ಮಲ್ಯದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಾಗೃತರಾಗಬೇಕಿದೆ ಎಂದು ಜಿಪಂ ಸಿಇಒ ದಿವಾಕರ್ ಹೇಳಿದರು.
ಅವರು ತಾಲೂಕಿನ ನಗರಂಗೆರೆ, ಪರಶುರಾಂಪುರ, ದೊಡ್ಡಚೆಲ್ಲೂರು, ಹಾಗೂ ದೊಡ್ಡವುಳ್ಳಾರ್ತಿ ಗ್ರಾಮ ಪಂಚಾತಿಗಳಿಗೆ ಭೇಟಿ ನೀಡಿ ನರೇಗಾ. ಘನತ್ಯಾಜ್ಯ ಘಟಕ, ಗ್ರಂಥಾಲಯ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿ ಮಾತನಾಡಿದರು.
ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಘನ ತ್ಯಾಜ್ಯ ಘಟಕಗಳು ಈಗಾ ಪ್ರತಿ ಗ್ರಾಮಗಳಲ್ಲಿಯೂ ಶುಚಿತ್ವ ಕಾಪಾಡಲು ಮತ್ತು ಘನ, ದ್ರವ ತ್ಯಾಜ್ಯವನ್ನು ಹೇಗೆ ನಿರ್ವಹಣೆ ಮಾಡಬೇಕು ಎಂಬುದನ್ನು ಈಗಾಗಲೆ ಮಹಿಳಾ ಸಂಘದ ಸದಸ್ಯರಿಗೆ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದೆ.
ಸ್ವಚ್ಛ ಭಾರತ್ ಯೋಜನೆಯಡಿ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಸಂಗ್ರಹವಾದ ಘನ ತ್ಯಾಜ್ಯವನ್ನು ಸ್ಥಳೀಯವಾಗಿಯೇ ವಿಲೇವಾರಿ ಮಾಡುವ ಸಲುವಾಗಿ ಗ್ರಾ.ಪಂ. ಮಟ್ಟದಲ್ಲೆ ಘನತ್ಯಾಜ್ಯ ವಿಲೇವಾರಿ ಹಾಗೂ ನಿರ್ವಹಣಾ ಘಟಕಗಳನ್ನು ನಿರ್ಮಿಸಲಾಗುತ್ತಿದೆ, ಪ್ರತಿ ಮನೆಯಲ್ಲಿ ಕಸ ಹಾಕುವ ಮೊದಲು ಹಸಿ, ಒಣ, ಮರು ಬಳಕೆಯಾಗುವ ಕಸ ಎಂದು ವಿಂಗಡಣೆ ಮಾಡ ಬೇಕು ಗ್ರಾ.ಪಂ. ಸಿಬ್ಬಂದಿ ಕಸ ಸಾಗಣೆ ವಾಹನಗಳ ಮೂಲಕ ಮನೆಗಳ ಬಳಿಗೆ ಹೋಗಿ ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸಿ ಘಕದಲ್ಲಿ ಸಂಗ್ರಹಿಸಿ ಗೊಬ್ಬರ ಮಾಡುವುದು ಮರುಬಳಕೆ ವಸ್ತುಗಳ ಮಾರಾಟದಿಂದ ಬಂದ ಆಧಾಯವನ್ನು ಗ್ರಾಮದ ಅಭಿವೃದ್ಧಿ ಹಾಗೂ ಸಿಬ್ಬಂದಿಗಳ ವೇತನಕ್ಕೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಗ್ರಾಪಂ ಡಿಜಿಟಲ್ ಗ್ರಂಥಾಲಯ ಉದ್ಘಾಟಿಸಿದರು. ಮಹಿಳಾ ಒಕ್ಕೂಟ .ಅರಣ್ಯ ಇಲಾಖೆ ಹಾಗೂ ನರೇಗಾ ಸಹಯೋಗದಿಂದ ನಿರ್ಮಿಸಿದ ವಿವಿಧ ಸಸಿ ಬೆಳೆಸುವ ನರ್ಸರಿ ಕೇಂದ್ರದ ಬಗ್ಗೆ ಮೆಚ್ಚಿಗೆ ವ್ಯಕ್ತಪಡಿಸಿದರು.
ನಂತರ ಬನಶ್ರೀ ವೃದ್ಧಾಶ್ರಮಕ್ಕೆ ಭೇಟಿ ನೀಡಿ ವೃದ್ದರ ಆರೋಗ್ಯ ವಿಚಾರಿಸಿ ಶೌಚಾಲಯ ವ್ಯವಸ್ಥೆ ಮಾಡಿಕೊಡುವಂತೆ ಪಿಡಿಒಗೆ ಹೇಳಿದರು.
ಈ ಸಂದರ್ಭದಲ್ಲಿ ನಗರಂಗೆರೆ ಗ್ರಾಪಂ ಅಧ್ಯಕ್ಷ ಕುಮಾರಸ್ವಾಮಿ. ಸದಸ್ಯರು. ತಾಪಂ ಇಒ ಹೊನ್ನಯ್ಯ ನರೇಗಾ ಸಹಾಯಕ ನಿರ್ದೇಶಕ ಸಂತೋಷ್, ಪಿಡಿಒ ರಾಮಚಂದ್ರ ಹಾಗೂ ಮಹಿಳಾ ಒಕ್ಕೂಟದ ಸದಸ್ಯರಿದ್ದರು.