ಚಳ್ಳಕೆರೆ : ಗ್ರಾಮೀಣ ಪ್ರದೇಶದಲ್ಲಿ ವ್ಯಾಸಂಗಕ್ಕೆ ಪೋಷಕರು ಹೆಚ್ಚಿನ ಆಧ್ಯತೆ ನೀಡಬೇಕು ಮಕ್ಕಳ ಮುಂದಿನ ಉಜ್ವಲ ಭವಿಷ್ಯಕ್ಕೆ ತಳಮಟ್ಟದಿಂದ ಪ್ರೇರಿಪಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದ್ದಾರೆ.
ಅವರು ತಾಲೂಕಿನ ಪರಶುರಾಮಪುರ ಗ್ರಾಮದಲ್ಲಿ ವೇದಾವತಿ ಆಂಗ್ಲ ಮಾಧ್ಯಮ ಶಾಲೆ ಮತ್ತು ವೇದಾವತಿ ಶಿಕ್ಷಣ ಮಹಾವಿದ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ 16ನೇ ಶಾಲಾ ವಾರ್ಷಿಕೋತ್ಸವದ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಇಂದಿನ ಆಧುನಿಕ ಭರಾಟೆಯಲ್ಲಿ ದಿನ ನಿತ್ಯದ ಮನುಷ್ಯನ ತೊಳಲಾಟದಲ್ಲಿ ಮಕ್ಕಳ ವ್ಯಾಸಂಗದ ಬಗ್ಗೆ ಪೋಷಕರು ಗಮನಹರಿಸುವುದೇ ವಿರಳ ಇಂತಹ ಸಂದ್ಗಿತ ಪರಸ್ಥಿಯಲ್ಲಿ ನಮ್ಮ ಒತ್ತಡಗಳನ್ನು ಬದಿಗೊತ್ತಿ ಮಕ್ಕಳ ವಿದ್ಯಾರ್ಜಾನೆಗೆ ಹೆಚ್ಚಿನ ಪ್ರಾಶ್ಚತ್ಯ ಕೊಡೊಣ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ವೆಂಕಟೇಶ್, ವೇದಾವತಿ ಟ್ರಸ್ಟ್ ಅಧ್ಯಕ್ಷ ನಾಗೇಶ್, ಸುಗುಣ ನಾಗೇಶ್, ನಿವೃತ್ತ ಶಿಕ್ಷಕ ರಾಮಚಂದ್ರಪ್ಪ, ನಿವೃತ್ತ ಪ್ರಾಂಶುಪಾಲರಾದ ಯಾದವರೆಡ್ಡಿ, ಮುಖ್ಯ ಶಿಕ್ಷಕರಾದ ಶ್ರೀನಿವಾಸ್ ಮೂರ್ತಿ, ಮಂಜಣ್ಣ, ಮುಖಂಡರು, ಕಾರ್ಯಕರ್ತರು ಮತ್ತು ಶಾಲೆ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.