ಚಳ್ಳಕೆರೆ : ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುವ ಪೌರಕಾರ್ಮಿಕರನ್ನು ಖಾಯಂ ಮಾಡಲು ಮುಂದಾಗಿರುವ ರಾಜ್ಯ ಸರಕಾರ ಪೌರಕಾರ್ಮಿಕರೊಟ್ಟಿಗೆ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುವ ವಾಹನ ಚಾಲಕರು. ನೀರು ಸರಬರಾಜು ಸಹಾಯಕರು, ಲೋಡರ್ಸ್, ಕ್ಲೀನರ್ಸ್ ಸೇರಿದಂತೆ ಸು.15ಸಾವಿರಕ್ಕೂ ಹೆಚ್ಚು ನೌಕರರನ್ನು ಗುತ್ತಿಗೆಯಲ್ಲಿ ಉಳಿಸಿ ತಾರತಮ್ಯ ಎಸಗಿದೆ ಎಂದು ಸ್ಥಳಿಯ ಸಂಸ್ಥೆಗಳ ನೌಕರರ ಸಂಘ, ಸರಕಾರದ ವಿರುದ್ಧ ಅಕ್ರೋಶ ವ್ಯಕ್ತ ಪಡಿಸಿದ್ದಾರೆ
ಅದೇ ರೀತಿಯಲ್ಲಿ ಸರಕಾರಕ್ಕೆ ಮಾಹಿತಿ ನೀಡಬೇಕಾದ ಚಳ್ಳಕೆರೆ ನಗರಸಭೆ ವಿಫಲವಾಗಿದೆ, ಇದರಿಂದ ಸುಮಾರು ಪೌರಕಾರ್ಮಿಕರಿಗೆ ಅನ್ಯಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದರಿಂದ ಹೊರಗುತ್ತಿಗೆಯಲ್ಲಿ ಕರ್ತವ್ಯ ನಿರ್ವಹಿಸುವ ನಮಗೆ ಅನ್ಯಯವಾಗಿದೆ, ಪೌರಕಾರ್ಮಿಕರು ತಮ್ಮ ಕರ್ತವ್ಯದಲ್ಲಿ ನಿರ್ಲಕ್ಷ ವಹಿಸಿದರೆ ನಗರಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಇಡೀ ನಗರವೇ ಸ್ವಚ್ಚತೆ ಇಲ್ಲದೆ ಗೊಬ್ಬೆದ್ದು ನಾರುವಂತಾಗುತ್ತದೆ ಕೂಡಲೆ ಹೊರಗುತ್ತಿಗೆ ನೌಕರರನ್ನು ಸರಕಾರ ಕಡೆಗಣಿಸಿದೆ ನಮಗೂ ನ್ಯಾಯಕೊಡುವಂತೆ ಒತ್ತಾಯಿಸಿದ್ದಾರೆ. ಈ ಕೂಡಲೆ ನಗರಸಭೆ ಅಧಿಕಾರಿಗಳು ಸರಕಾರಕ್ಕೆ ಬೇಡಿಕೆ ಪಟ್ಟಿ ಕಳಿಸಿರುವ ಬಗ್ಗೆ ವರದಿ ನಿಡಬೇಕು ಎಂದು ಒತ್ತಾಯಿಸಿದ್ದಾರೆ,
ನಗರಗಳ ಸ್ವಚ್ಛತೆ ಹಾಗೂ ಕುಡಿಯುವ ನೀರು ನಿರ್ವಹಣೆಯಲ್ಲಿ ಹೊರಗುತ್ತಿಗೆ ನೌಕರರ ಪಾತ್ರವಹಿಸಿದ್ದಾರೆ. 2017ರಲ್ಲಿ ಪೌರಕಾರ್ಮಿಕರ ನೇಮಕಾತಿ ಗೊಳಿಸಿದಾಗಲೂ ಹೊರಗುತ್ತಿಗೆ ನೌಕರರನು ಗುತ್ತಿಗೆಯಲ್ಲಿ ಉಳಿಸಲಾಯಿತು. ಈಗಲೂ ಸಹ ಹೊರಗುತ್ತಿಗೆ ನೌಕರರನ್ನು ಗುತ್ತಿಗೆಯಲ್ಲಿ ಮುಂದುವರಿಸುವ ಸರಕಾರದ ನೀತಿ ಒಂದುಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಎಂಬAತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆದ್ದರಿಂದ ಜ.31ರಂದು ಬೆಂಗಳೂರು ಚಲೋ ಮೂಲಕ ನಮ್ಮಹಕ್ಕು ಪಡೆಯುತ್ತೆವೆ ಆದ್ದರಿಂದ ಎಲ್ಲಾ ಪೌರಾಕಾರ್ಮಿಕರು ಪಾಲ್ಗಗೊಳ್ಳಬೇಕು ಎಂದು ಜಿಲ್ಲಾ ಅಧ್ಯಕ್ಷ ಶಿವರಾಜ್ ಮನವಿ ಮಾಡಿದರು.
ಹೊರಗುತ್ತಿಗೆ ನೌಕರರ ನ್ಯಾಯಬದ್ಧ ಹಕ್ಕಿಗಾಗಿ ಆಗ್ರಹಿಸುವುದು ನಮ್ಮ ಹಕ್ಕಾಗಿದೆ. ಒಂದೇ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವವರ ನಡುವೆ ಒಡೆದಾಳುವ ನೀತಿ ಅನುಸರಿಸುವುದು ಯಾವುದೇ ಸರಕಾರಕ್ಕೆ ಶೋಭೆಯಲ್ಲ. ಸರಕಾರ ಜನವರಿ 25ರೊಳಗೆ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ನೇರವಾಗ ಹಾಗೂ ಖಾಯಂಗೆ ಕ್ರಮವಹಿಸದಿದ್ದಲ್ಲಿ ಜನವರಿ 31ರಂದು ವಿಧಾನಸೌಧ ಮುತ್ತಿಗೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪಾಲಿಕೆ. ನರಸಭೆ. ಪಟ್ಟಣ ಪಂಚಾಯತ್ ಹೊರಗುತ್ತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಶಿವರಾಜ್ ಹಾಗೂ ಹೊರಗುತ್ತಿಗೆ ಪೌರಕಾರ್ಮಿಕರು ಒತ್ತಾಯಿಸಿದ್ದಾರೆ.