ಚಿತ್ರದುರ್ಗ, ಜ. 17 – ಇದೇ 19ರಂದು ಸಂಜೆ 5.30ಗಂಟೆಗೆ ಶ್ರೀ ಮುರುಘಾಮಠದ ಅನುಭವ ಮಂಟಪದಲ್ಲಿ ನಗರದ ಎಸ್.ಜೆ.ಎಂ. ದಂತ ಮಹಾವಿದ್ಯಾಲಯ ವತಿಯಿಂದ 32ನೇ ಪದವಿ ಪ್ರದಾನ ಸಮಾರಂಭ ನಡೆಯಲಿದೆ.
ಬೆಂಗಳೂರು ಸರ್ಕಾರಿ ದಂತ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಡಾ. ಗಿರೀಶ್ ಬಿ. ಗಿರಡ್ಡಿ ಮುಖ್ಯಅತಿಥಿಯಾಗಿ ಭಾಗವಹಿಸುವರು. ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತಾಧಿಕಾರಿ ಪಿ.ಎಸ್. ವಸ್ತçದ ಅಧ್ಯಕ್ಷತೆ ವಹಿಸುವರು. ಪ್ರಾಚಾರ್ಯರಾದ ಡಾ. ಆರ್. ಗೌರಮ್ಮ ಮತ್ತು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸುವರು.