ಚಳ್ಳಕೆರೆ : ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂಧಿಸಲು ಗ್ರಾಮ ವಾಸ್ತವ್ಯ ಸಹಕಾರಿಯಾಗಿದೆ. ಪ್ರತಿ ತಿಂಗಳು ನಡೆಯುವ ಈ ಕಾರ್ಯಕ್ರಮದಲ್ಲಿ ಜನರು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಗ್ರೇಡ್-2 ತಹಶೀಲ್ದಾರ್ ಸಂಧ್ಯಾ ಹೇಳಿದರು.
ತಾಲೂಕಿನ ಪರಶುರಾಂಪುರ ಹೋಬಳಿಯ ಚನ್ನಮ್ಮನಾಗತಿಹಳ್ಳಿ ಗ್ರಾಪಂ ಕಚೇರಿ ಕೇಂದ್ರದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರತಿ ತಿಂಗಳ ಮೂರನೇ ಶನಿವಾರ ತಾಲ್ಲೂಕು ಆಡಳಿತದಿಂದ ಹಮ್ಮಿಕೊಳ್ಳುವ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಗ್ರಾಮವ ಸರ್ವತೋಮುಖ ಅಭಿವೃದ್ದಿಗೆ ನಾಂಡಿ ಹಾಡಲಿದೆ, ಸಾರ್ವಜನಿಕರು ದೂರು ನೀಡಿದ ಕೆಲವು ದಿನಗಳಲ್ಲಿ ಅವರ ಸಮಸ್ಯೆಗೆ ತಿಳಿಗೊಳಿಸುವಲ್ಲಿ ಅಧಿಕಾರಿಗಳು ಸನ್ನದಾರಾಗಬೇಕು ಎಂದರು..
ರೈತರ ಹೊಲಗಳಿಗೆ ಹೋಗುವ ರಸ್ತೆ, ವಿದ್ಯುತ್, ನಿವೇಶನ, ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಪ್ರತಿ ಸಭೆಯಲ್ಲಿ ಚರ್ಚೆ ನಡೆಯುತ್ತಿವೆ ಗ್ರಾಮಸ್ಥರು ಮನವಿ ನೀಡಿದರೆ ತಕ್ಷಣ ನಿಮ್ಮ ಸಮಸ್ಯೆ ಬಗೆಹರಿಸಲಾಗುತ್ತದೆ, ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಸಂಬAಧಪಟ್ಟ ಅಧಿಕಾರಿಗಳು ಬಂದಿಲ್ಲ. ಕೆಲವು ಇಲಾಖೆಯ ಸಹಾಯಕರು ಬಂದಿದ್ದಾರೆ. ಇನ್ನು ಸ್ಥಳದಲ್ಲೇ ಯಾವ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತಿಲ್ಲ ಮುಂದಿನ ದಿನಗಳಲ್ಲಿ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷರು ಸದಸ್ಯರು ಗ್ರಾಮದಲ್ಲಿನ ಸಮಸ್ಯೆಗಳ ಬಗೆಹರಿಸುವ ಬದಲು ವೇಧಿಕೆಯಲ್ಲಿ 15 ನೇ ಹಣಕಾಸು ಕಾಮಗಾರಿಗಳ ಬಿಲ್ ಬಂದಿಲ್ಲ ಎಂದು ಅಧಿಕಾರಿಗಳ ಬಳಿ ಚರ್ಚೆ ಮಾಡುತ್ತಿರುವುದು ಕಂಡು ಬಂತು.
ಇದೇ ಸಂಧರ್ಭದಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿ ಸಿಬ್ಬಂದಿ ವರ್ಗ ಹಾಜರಿದ್ದರು.