ಚಳ್ಳಕೆರೆ : ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ತನ್ನ ಜೀವನವನ್ನು ಮುಡುಪಾಗಿಟ್ಟ ದೀಮಂತೆ, ಮಹಿಳೆಯರಿಗೆ ಅಕ್ಷರದ ಬೆಳಕು ಕೊಟ್ಟು ಸ್ವಾಭಿಮಾನಿಗಳಾಗಿ ಬದುಕಲು ಕಲಿಸಿಕೊಟ್ಟ÷ ಅದ್ಬುತ ಚೇತನ ಸಾವಿತ್ರಿ ಬಾಪುಲೆಯರವರು ಎಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಹೇಳಿದರು.
ಅವರು ನಗರದ ವಾಲ್ಮಿಕಿ ಭವನದಲ್ಲಿ ಆಯೋಜಿಸಿದ್ದ ಸಾವಿತ್ರಿ ಬಾಪುಲೆ ಜನ್ಮ ದಿನಾಚರಣೆ ಹಾಗೂ ಅಕ್ಷರ ಸಿರಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸ್ವತಂತ್ರ ಪೂರ್ವದಲ್ಲಿ ಸಾವಿತ್ರಿ ಬಾಯಿಯವರು ಹಲವಾರು ಕಷ್ಟ ಮತ್ತು ಅಪಾಮಾನಗಳನ್ನು ಸಹಿಸಿಕೊಂಡು ಉತ್ತಮ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ತನ್ನ ಪತಿ ಜ್ಯೋತಿ ಬಾಪುಲೆ ರವರ ಸಹಕಾರದೊಂದಿಗೆ 18ಪಾಠಶಾಲೆಗಳನ್ನು ತೆರೆದು ಶಿಕ್ಷಣ ಕ್ರಾಂತಿಯನ್ನುAಟು ಮಾಡಿದರು ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಆರ್.ಮಾರುತೇಶ್ ಮಾತನಾಡಿ, ಸಾವಿತ್ರಿಬಾಯಿ ಪುಲೆರವರು ಸಮಾಜದಲ್ಲಿನ ಅನಿಷ್ಠ ಪದ್ಧತಿಗಳಾದ ಬಾಲ್ಯವಿವಾಹ, ಸತಿ ಸಹಗಮ ಪದ್ಧತಿ, ವಿರುದ್ಧ ಹೋರಾಟ ಮಾಡಿ ಸ್ತಿçÃಯರ ರಕ್ಷಣೆಗೆ ಶ್ರಮಿಸಿದ್ದಾರೆ. ಇವರ ಸೇವೆಯನ್ನು ಗುರುತಿಸಿ ಬ್ರಿಟಿಷ್ ಸರ್ಕಾರ “ಭಾರತ ಮೊದಲ ಮಹಿಳಾ ಶಿಕ್ಷಕಿ” ಎಂಬ ಬಿರುದನ್ನು ನೀಡಿ ಗೌರವಿಸಿದರು.
ಬಿಇಓ ಕೆ.ಎಸ್.ಸುರೇಶ್ ಮಾತನಾಡಿ, ಸಾವಿತ್ರಿಬಾಯಿ ಪುಲೆರವರು ಸಮಾಜದಲ್ಲಿನ ಅನಿಷ್ಠ ಪದ್ಧತಿಗಳಾದ ಬಾಲ್ಯವಿವಾಹ, ಸತಿ ಸಹಗಮ ಪದ್ಧತಿ, ಕೇಶಮುಂಡನೆ ವಿರುದ್ಧ ಹೋರಾಟ ಮಾಡಿ ಸ್ತಿçÃಯರ ರಕ್ಷಣೆಗೆ ಶ್ರಮಿಸಿದ್ದಾರೆ. ಇವರ ಸೇವೆಯನ್ನು ಗುರುತಿಸಿ ಬ್ರಿಟಿಷ್ ಸರ್ಕಾರ “ಭಾರತ ಮೊದಲ ಮಹಿಳಾ ಶಿಕ್ಷಕಿ” ಎಂಬ ಬಿರುದನ್ನು ನೀಡಿ ಗೌರವಿಸಿದರು. ಆದ್ದರಿಂದ ವಿದ್ಯಾರ್ಥಿಗಳು ಅವರ ಆದರ್ಶ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದ ಪರಿವರ್ತನೆಗೆ ಶ್ರಮಿಸಬೇಕೆಂದು ಕಿವಿಮಾತು ತಿಳಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುರೇಶ್, ನಗರಸಭೆ ಅಧ್ಯಕ್ಷೆ ಸುಮಕ್ಕ ಆಂಜನೇಯ, ಉಪಾಧ್ಯಕ್ಷರಾದ ಮಂಜುಳಾ ಆರ್ ಪ್ರಸನ್ನ ಕುಮಾರ್, ಸದಸ್ಯರುಗಳಾದ ಸುಮಾ ಭರಮಯ್ಯ, ಕವಿತಾ ಬೋರಯ್ಯ, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಮಾರುತೇಶ್, ಮುಖಂಡರುಗಳಾದ ಪ್ರಕಾಶ್, ಆನಂದ್ ಕುಮಾರ್, ಮುಖಂಡರು, ಕಾರ್ಯಕರ್ತರು ಮತ್ತು ಶಿಕ್ಷಕವೃಂಧದವರು ಉಪಸ್ಥಿತರಿದ್ದರು.
ಪೋಟೋ ಚಳ್ಳಕೆರೆ. ನಗರದ ವಾಲ್ಮಿಕಿ ಭವನದಲ್ಲಿ ಆಯೋಜಿಸಿದ್ದ ಸಾವಿತ್ರಿ ಬಾಪುಲೆ ಜನ್ಮ ದಿನಾಚರಣೆಯಲ್ಲಿ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಭಾಗವಹಿಸಿ ಮಾತನಾಡಿದರು.