ನಾಯಕನಹಟ್ಟಿ ಪಟ್ಟಣ ಪಂಚಾಯತಿ ಅವರಣದಲ್ಲಿ 74ನೇ ಗಣರಾಜ್ಯೋತ್ಸವ ಸಂಭ್ರಮ ದಿಂದ ಜರುಗಿತು
ನಾಯಕನಹಟ್ಟಿ :: ಪಟ್ಟಣದ ವಿವಿಧ ಶಾಲೆಯ ವಿದ್ಯಾರ್ಥಿಗಳು ಶಿಸ್ತಿನ ಸಿಪಾಯಿಗಳಂತೆ ಸಮವಸ್ತ್ರ ಧರಿಸಿ ರಾಷ್ಟ್ರಧ್ವಜರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇಶಪ್ರೇಮ ಮೆರೆದರು.
ಪಟ್ಟಣ ಪಂಚಾಯತಿಯ ಸರ್ವ ಸದಸ್ಯರು ಸಾರ್ವಜನಿಕರು ಸಹಕಾರ ನೀಡಿದಲ್ಲಿ ಪಟ್ಟಣವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಪಣತೊಡುತ್ತೇವೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಧಿಕಾರಿ ಟಿ.ಲೀಲಾವತಿ ಹೇಳಿದ್ದಾರೆ.
ಗುರುವಾರ ಪಟ್ಟಣದ ಪಟ್ಟಣ ಪಂಚಾಯತಿ ಆವರಣದಲ್ಲಿ 74ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ್ದಾರೆ ಸ್ವಾತಂತ್ರದ ನಂತರ ದೇಶವು ತನ್ನದೇ ಆದ ಸಂವಿಧಾನವನ್ನು ಹಲವು ಚರ್ಚೆಗಳ ತಿದ್ದುಪಡಿ ನಂತರ ಡಾ. ಬಿ ಆರ್ ಅಂಬೇಡ್ಕರ್ ಅವರ ನೇತೃತ್ವದಲ್ಲಿ ಸಮಿತಿಯು ಭಾರತೀಯ ಸಂವಿಧಾನ ಕರಡನ್ನು ರಚಿಸಿ ಸಲ್ಲಿಸಿತು.
ಜಗತ್ತಿನ ಅತ್ಯಂತ ಸರ್ವ ಶ್ರೇಷ್ಠವಾದ ಸಂವಿಧಾನವನ್ನು ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಸಂವಿಧಾನವನ್ನು ರಚನೆ ಮಾಡಿದ ಕೀರ್ತಿ ಸಲ್ಲುತ್ತದೆ ಎಂದರು.
ಇದೆ ವೇಳೆ ಪಟ್ಟಣ ಪಂಚಾಯತಿ ಸದಸ್ಯ ಜಿಆರ್ ರವಿಕುಮಾರ್ ಮಾತನಾಡಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರನ್ನು ಭಾರತೀಯ ಪ್ರತಿಯೊಬ್ಬ ಪ್ರಜೆಯೂ ಸ್ಮರಿಸಬೇಕು ಇಡೀ ವಿಶ್ವ ಮೆಚ್ಚು ವಂತಹ ಸಂವಿಧಾನವನ್ನು ರಚಿಸಿದ್ದಾರೆ ಎಂದರು
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಸದಸ್ಯರಾದ ಜಿ ಆರ್ ರವಿಕುಮಾರ್, ಶ್ರೀ ಮಂಜುಳಾ ಶ್ರೀಕಾಂತ್, ಸೈಯದ್ ಅನ್ವರ್, ದುರುಗಪ್ಪ, ಪಾಪಮ್ಮ ಬಿ ವಿನುತಾ, ಪಟ್ಟಣ ಪಂಚಾಯತಿ ಸಿಬ್ಬಂದಿಗಳು ಉಪಸ್ಥಿತರಿದ್ದರು