ಚಳ್ಳಕೆರೆ : ನಗರದ ಬೆಂಗಳೂರು ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯ ಆವರಣದಲ್ಲಿ ಜ.30 ರಂದು ಭಾರತ್ ಜೋಡೋ ಪಾದಯಾತ್ರೆಯ ಸಮಾರೋಪ ಸಮಾರಂಭದ ಪ್ರಯುಕ್ತ ರಾಷ್ಟ್ರ ಧ್ವಜಾರೋಹಣ ಮತ್ತು ಹುತಾತ್ಮರ ದಿನಾಚರಣೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಾಂಗ್ರೆಸ್ ಪಕ್ಷದ ಎಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಮತ್ತು ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಹಾಗೂ ಮಾಜಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರ, ಸದಸ್ಯರುಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಮತ್ತು ಕಾಂಗ್ರೆಸ್ ಪಕ್ಷದ ಎಲ್ಲಾ ಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ.ತಿಪ್ಪೆಸ್ವಾಮಿ ಕರೆ ನೀಡಿದ್ದಾರೆ.