ಫೆ.4ರಂದು ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ರಥೋತ್ಸವ ಕುರಿತ ಪೂರ್ವ ಸಿದ್ಧತಾ ಸಭೆ
ಚಿತ್ರದುರ್ಗ : ನಾಯಕನಹಟ್ಟಿ, ಶ್ರೀ ಗುರುತಿಪ್ಪೇರುದ್ರಸ್ವಾಮಿ ರಥೋತ್ಸವ ಮಾರ್ಚ್ 03 ರಿಂದ 13 ವರೆಗೆ ನಡೆಯಲ್ಲಿರುವ ಹಿನ್ನೆಲೆಯಲ್ಲಿ ಕುರಿತ ಪೂರ್ವ ಸಿದ್ಧತಾ ಸಭೆ ಫೆ. 04 ರಂದು ಮಧ್ಯಾಹ್ನ 03 ಗಂಟೆಗೆ ನಾಯಕನಹಟ್ಟಿ, ದೇವಸ್ಥಾನದ ಒಳಮಠದ ಸಮುದಾಯ ಭವನದಲ್ಲಿ ನಡೆಯಲಿದೆ. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ವಹಿಸುವರು. ಸಭೆಯಲ್ಲಿ ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್, ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮಲು ಅವರ ಉಪಸ್ಥಿತಿಯಲ್ಲಿ ಸಿದ್ಧತಾ ಸಭೆ ಜರುಗಲಿದೆ. ಸಂಬAಧಿಸಿದ ಅಧಿಕಾರಿಗಳು ಕಡ್ಡಾಯವಾಗಿ ಸಭೆಗೆ ಹಾಜರಾಗುವಂತೆ ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.