ಚಳ್ಳಕೆರೆ : ಈಡೀ ರಾಜ್ಯಾದ್ಯಾಂತ ಕಾಂಗ್ರೇಸ್ ಪಕ್ಷದ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ತಂಡÀ ಪ್ರಜಾಧ್ವನಿ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದು
ಈ ವಿನೂತನ ಪ್ರಜಾಧ್ವನಿ ಕಾರ್ಯಕ್ರಮದ ಪ್ರಮುಖ ಪಕ್ಷದ ವರಿಷ್ಠರು ಫೆ.6 ರಂದು ಚಳ್ಳಕೆರೆ ಕ್ಷೇತ್ರಕ್ಕೆ ಬರುವ ನಿರೀಕ್ಷೆ ಮೇರೆಗೆ ಜ.1 ರಂದು ನಗರದ ಶಾಸಕರ ಭವನದಲ್ಲಿ ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ.
ಆದ್ದರಿಂದ ಈ ಕಾರ್ಯಕ್ರಮಕ್ಕೆ ಎ.ಐ.ಸಿ.ಸಿ. ಕಾರ್ಯದರ್ಶಿಗಳಾದ ಮಯೂರ ಜಯಕುಮಾರ್ ಪ್ರಯುಕ್ತ ಕಾಂಗ್ರೆಸ್ ಪಕ್ಷದ ಎಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಮತ್ತು ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಹಾಗೂ ಮಾಜಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರ, ಸದಸ್ಯರುಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಮತ್ತು ಕಾಂಗ್ರೆಸ್ ಪಕ್ಷದ ಎಲ್ಲಾ ಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕೋರಿದೆ ಎಂದು ಚಳ್ಳಕೆರೆ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಟಿ.ತಿಪ್ಪೆಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.