ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಶ್ರೀ ವಾಲ್ಮೀಕಿ ಮಹರ್ಷಿಗಳ ಗುರುಪೀಠಕ್ಕೆ ಭೇಟಿ ನೀಡಿ ಶ್ರೀ ಪ್ರಸನ್ನಾನಂದ ಪುರಿಮಹಾಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ವಾಲ್ಮೀಕಿ ಜಾತ್ರೆಯ ಅಧ್ಯಕ್ಷರು ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಚಂದ್ರಪ್ಪ, ಹಾಗೂ ಮುಖಂಡರು, ಕಾರ್ಯಕರ್ತರು, ಮತ್ತು ಜಾತ್ರಾ ಸಮಿತಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.