ಚಳ್ಳಕೆರೆ : ಮಳೆ ನೀರು ಸಂಗ್ರಹಣೆ ಮತ್ತು ಪ್ಲಾಸ್ಟಿಕ್ ಬಳಕೆ ಬಗ್ಗೆ ಜಾಗೃತಿಯನ್ನು ಮೂಡಿಸುವ ಮೂಲಕ ಪರಿಸರ ಸಂರಕ್ಷಣೆಗೆ ನಾವೆಲ್ಲರೂ ಮುಂದಾಗಬೇಕೆAದು ಸ್ಮರ‍್ದೆಹ ವಿದ್ಯಾಸಂಸ್ಥೆಯ ಸಂಸ್ಥಾಪಕಕಾರ್ಯದರ್ಶಿ ಎಂ.ಎನ್.ಹನುಮAತಪ್ಪ ತಿಳಿಸಿದರು.
ಅವರು, ಸಂಸ್ಥೆಯ ಮಂಜರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಚಿತ್ರದುರ್ಗ ಹಾಗೂ ವಿದ್ಯಾಸಂಸ್ಥೆಯ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಮಳೆ ನೀರು ಸಂಗ್ರಹ ಮತ್ತು ಪ್ಲಾಸ್ಟಿಕ್ ಬಳಕೆ ನಿಷೇದ ಕುರಿತು ಏರ್ಪಡಿಸಿದ್ದ ವಿಶೇಷ ಜಾಗೃತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಶಾಲೆಯಲ್ಲಿ ವಿದ್ಯಾರ್ಥಿಗಳು ತಮ್ಮ ದೈನದೀನ ವಿದ್ಯಾಭ್ಯಾಸ ಹಾಗೂ ಪಠ್ಯೇತರ ಚಟುವಟಿಕೆಗಳೊಂದಿಗೆ ಪರಿಸರ ಸಂರಕ್ಷಣೆ ಬಗ್ಗೆಯೂ ಸಹ ಹೆಚ್ಚು ಗಮನಹರಿಸಬೇಕು. ಶಾಲಾ ಆವರಣದಲ್ಲಿ ಉತ್ತಮ ಮರಗಿಡಗಳನ್ನು ನೆಟ್ಟು ಪೋಷಿಸಬೇಕು. ಹೆಚ್ಚು, ಹೆಚ್ಚು ಮರಗಿಡ ಬೆಳೆಸುವ ಮೂಲಕ ನಾವೆಲ್ಲರೂ ಪರಿಸರ ಪ್ರೇಮಿಗಳಾಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕಿ ಕೆ.ರಾಜೇಶ್ವರಿ ಮಾತನಾಡಿ, ಪ್ರತಿವರ್ಷವೂ ನಮ್ಮ ಶಾಲೆಯಲ್ಲಿ ಮಕ್ಕಳಿಗೆ ನೈಸರ್ಗಿಕ ಸಂಪತ್ತು ರಕ್ಷಣೆ ಹಾಗೂ ಅವುಗಳ ಸಂದರ್ಭೋಚಿತ ಬಳಕೆಯ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಪರಿಸರದ ಮೇಲೆ ಹೆಚ್ಚು ಅಭಿಮಾನವಿರುತ್ತದೆ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು ಎಂದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಕೆ.ಪಿ.ಅಭಿಲಾಷ್, ಬಿ.ಎಂ.ಶಿವಶAಕರ್, ವಸಂತಕುಮಾರ್ ಮುಂತಾದವರು ಉಪಸ್ಥಿತರಿದ್ದರು.