ಚಳ್ಳಕೆರೆ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಪ್ರಾಥಮಿಕ- ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಶಿಕ್ಷಕರು ನೀಡುತ್ತಿದ್ದಾರೆ ಎಂದು ದೇವರಮರಿಕುಂಟೆ ಗ್ರಾಪಂ ಅಧ್ಯಕ್ಷೆ ಲಕ್ಷಿö್ಮÃದೇವಿರಮೇಶ ಹೇಳಿದರು
ಸಮೀಪದ ಯಲಗಟ್ಟೆಗೊಲ್ಲರಹಟ್ಟಿ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಡಿ ಮರಿಕುಂಟೆ ಸ್ಥಳೀಯ ಆಡಳಿತ, ಸಿಆರ್‌ಸಿ ಕೇಂದ್ರದ ವತಿಯಿಂದ ದೇವರಮರಿಕುಂಟೆ ಕ್ಲಸ್ಟರ್ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶುಕ್ರವಾರ ಆಯೋಜಿಸಿದ್ದ ಕಲಿಕಾ ಹಬ್ಬವನ್ನು ಉಧ್ಘಾಟಿಸಿ ಮಾತನಾಡಿದರು ಗ್ರಾಪಂ ವ್ಯಾಪ್ತಿಯ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕಲಿಕೆ ಉತ್ತಮಪಡಿಸಲು ಮೂಲಸೌಕರ್ಯಗಳ ಜತೆಗೆ ಪಠ್ಯ ಸಹಪಠ್ಯ ಚಟುವಟಿಕೆಗಳಿಗೆ ಅಗತ್ಯ ನೆರವನ್ನೂ ನೀಡಲಾಗುವುದು ಎಂದರು
ಚಳ್ಳಕೆರೆ ತಾಲೂಕು ಕ್ಷೇತ್ರಶಿಕ್ಷಣಾಧಿಕಾರಿ ಕೆ ಎಸ್ ಸುರೇಶ ಮಾತನಾಡಿ ಸರ್ಕಾರದ ನಿರ್ದೇಶನದಂತೆ ಶಿಕ್ಷಕರು, ಮುಖ್ಯಶಿಕ್ಷಕರು, ಸಿಆರ್‌ಪಿಗಳು ಆಯಾ ವ್ಯಾಪ್ತಿಯ ಶಿಕ್ಷಣ ಸಂಯೋಜಕರು ಶಾಲಾ ಸಮಿತಿಯವರ ಹಾಗೂ ಗ್ರಾಪಂ ಸದಸ್ಯರ ಪೋಷಕರ ಸಹಕಾರ ಪಡೆದು ಶಾಲೆಯಲ್ಲಿ ಕಲಿಕಾ ಹಬ್ಬವನ್ನು ಅರ್ಥಪೂರ್ಣವಾಗಿ ಆಯೋಜಿಸಿದ್ದಾರೆ ಸಂವಿಧಾನ ಸರ್ಕಾರದ ಆಶಯದಂತೆ ಮಕ್ಕಳಿಗೆ ಪಠ್ಯ ಸಹಪಠ್ಯ ಚಟುವಟಿಕೆಗಳನ್ನು ನಿಯಮಿತವಾಗಿ ಶಾಲೆಗಳಲ್ಲಿ ಹಮ್ಮಿಕೊಂಡು ಮಕ್ಕಳ ಕಲಿಕೆಗೆ ಅನುಕೂಲಿಸಿದ್ದಾರೆ ಎಂದು ಶ್ಲಾಘಿಸಿದರು
ಚಿತ್ರದುರ್ಗ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್ ಮಾರುತೇಶ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಿ ಮಾತನಾಡಿ ಜಿಲ್ಲೆಯಲ್ಲಿಯೇ ಚಳ್ಳಕೆರೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ಕಲಿಕಾ ಹಬ್ಬದ ವಿವಿಧ ಪಠ್ಯೇತರ ಚಟುವಟಿಕೆಗಳನ್ನು ನಿಯಮಿತವಾಗಿ ತರಬೇತಿ ನೀಡಿ ಮಕ್ಕಳ ಕಲಿಕೆಯನ್ನು ಉತ್ತಮಪಡಿಸಿದ್ದಾರೆ ಶಾಲಾ ಕಾರ್ಯಕ್ರಮಗಳ ಯಶಸ್ವಿಗೆ ಆಯಾ ಗ್ರಾಮದ ಜನಪ್ರತಿನಿಧಿಗಳು ಶಾಲಾ ಸಮಿತಿಯವರ ಸಹಕಾರ ಪ್ರೋತ್ಸಾಹ ಮೆಚ್ಚುವಂತಹುದು ಎಂದು ಶ್ಲಾಘಿಸಿದರು
ಇದೇ ವೇಳೆ ಯಲಗಟ್ಟೆ, ಗೊಲ್ಲರಹಟ್ಟಿ, ಕೆಟಿಹಳ್ಳಿ, ಬೊಂಬೇರರಹಳ್ಳಿ, ವಡೇರಹಳ್ಳಿ, ಹಳೇಗೊಲ್ಲರಹಟ್ಟಿ, ಶಾಂತಿನಗರ ಸುತ್ತಲಿನ ಸರ್ಕಾರಿ ಶಾಲೆಗಳ ಆಯ್ದ ವಿದ್ಯಾರ್ಥಿಗಳು ಕಲಿಕಾ ಹಬ್ಬದಲ್ಲಿ ಪಾಲ್ಗೊಂಡಿದ್ದರು
ಸAದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಲಕ್ಷಿö್ಮÃದೇವಿರಮೇಶ, ಸದಸ್ಯರಾದ ಶ್ರೀನಿವಾಸ, ತಿಪ್ಪೇಸ್ವಾಮಿ,ಕುಮಾರ್, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಮಹಾಲಿಂಗಪ್ಪ, ಶಾಲಾ ಸಮಿತಿಯ ಅಧ್ಯಕ್ಷರಾದ ಶಶಿಧರಪೂಜಾರ್, ಶಿವಣ್ಣ, ವೀರೇಂದ್ರ, ತಿಪ್ಪೇಸ್ವಾಮಿ, ಸಿಆರ್‌ಪಿ ನಾಗರಾಜು, ಮುಖ್ಯಶಿಕ್ಷಕರಾದ ಸಿ ಎಂ ಶಿವಕುಮಾರ, ಸಿ ತಿಪ್ಪೇಸ್ವಾಮಿ,ಜಿ ಟಿ ತಿಪ್ಪೇಸ್ವಾಮಿ, ವೀರಭದ್ರಪ್ಪ, ಸಾವಿತ್ರಮ್ಮ, ವಿವಿಧ ಶಾಲೆಗಳ ಶಿಕ್ಷಕರು ವಿದ್ಯಾರ್ಥಿಗಳು ಗ್ರಾಮಸ್ಥರು ಇದ್ದರು

Namma Challakere Local News
error: Content is protected !!