ಗ್ರಾಮೀಣ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿಗೆ ಪಲ್ಲವಗೆರೆಯ ಶಿಕ್ಷಕ ಸಿಸಿಈ ಎಸ್ದುರ್ಗ ನರಸಿಂಹಮೂರ್ತಿ ಆಯ್ಕೆ
ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ರಾಜ್ಯ ಘಟಕ ಹುಬ್ಬಳ್ಳಿ ಹಾಗೂ ಧಾರವಾಡ ಜಿಲ್ಲಾ ಘಟಕಗಳ ಸಹಯೋಗದಲ್ಲಿ ಪ್ರತೀ ವರ್ಷ ಉತ್ತಮ ಶಿಕ್ಷಕರಿಗೆ ಕೊಡಮಾಡುವ ಗ್ರಾಮೀಣ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿಗೆ ಚಿತ್ರದುರ್ಗ ತಾಲೂಕು ಕಸಬಾ ಹೋಬಳಿಯ ಪಲ್ಲವಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಪಿಆರ್ಪುರ ಹೋಬಳಿಯ ಸಿದ್ದೇಶ್ವರನದುರ್ಗ ಗ್ರಾಮದ ಸಿಸಿಈ ನರಸಿಂಹಮೂರ್ತಿ ಅವರನ್ನು ಆಯ್ಕೆ ಮಾಡಿದ್ದಾರೆ
ಫೆ 11 ರಂದು ಹುಬ್ಬಳ್ಳಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪುರಸ್ಕೃತರನ್ನು ಗೌರವಿಸಲಗುವುದು ಎಂದು ಸಂಘದ ಅಧ್ಯಕ್ಷ ಅಶೋಕ ಎಂ ಕಾರ್ಯದರ್ಶಿ ಸಿ ಮಲ್ಲಿಕಾರ್ಜುನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ