ಹಟ್ಟಿ ತಿಪ್ಪೇಶನ ಜಾತ್ರೆಗೆ ಬರುವ ಭಕ್ತರಿಗೆ ನೀರಿನ ಸೌಲಭ್ಯ ಒದಗಿಸಲು ನೀರಿನ ಮೂಲಗಳ ಸ್ಥಳ ಪರಿಶೀಲನೆ ಮಾಡಿದ ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಟಿ. ಲೀಲಾವತಿ .
ನಾಯಕನಹಟ್ಟಿ::ಮಧ್ಯ ಕರ್ನಾಟಕದ ಐತಿಹಾಸಿಕ ಪ್ರಸಿದ್ಧ ಶ್ರೀ ಗುರು ತಿಪ್ಪೇರುದ್ರ ಸ್ವಾಮಿಯ ಜಾತ್ರಾ ಮಹೋತ್ಸವಕ್ಕೆ ಪೂರ್ವ ಸಿದ್ಧತೆ
ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಯನ್ನು ಪಟ್ಟಣ ಪಂಚಾಯಿತಿ ಮತ್ತು ಜಿಲ್ಲಾಡಳಿತದ ವತಿಯಿಂದ ಇಂದು ಸ್ಥಳ ಪರಿಶೀಲನೆ ಮಾಡಲಾಯಿತು ಸುಮಾರು ಹತ್ತು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವಕ್ಕೆ ಮೂರು ನಾಲ್ಕು ಲಕ್ಷಗಳಿಗಿಂತ ಹೆಚ್ಚಿನ ಭಕ್ತಾದಿಗಳು ಬರುವ ನಿರೀಕ್ಷೆಯಿದ್ದು ಮುಂಜಾಗ್ರತ ಕ್ರಮವಾಗಿ ನೀರು ಆರೋಗ್ಯ ಮುಂತಾದ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಮತ್ತು ಪಟ್ಟಣ ಪಂಚಾಯಿತಿ ವತಿಯಿಂದ ಮಾಡಲಾಗುತ್ತಿದೆ
ಬೈಟ್:- ಲೀಲಾವತಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ
….
ಗಂಗಾಧರಪ್ಪ ಹಚ್. ಕಾರ್ಯನಿರ್ವಾಹಕ ಅಧಿಕಾರಿ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನ ನಾಯಕನಹಟ್ಟಿ.
… ಮೂರು ದಿನಗಳ ಕಾಲ ಹೆಚ್ಚು ಭಕ್ತಾದಿಗಳು ಬರುವ ನಿರೀಕ್ಷೆಯಿದ್ದು ನಮ್ಮಲ್ಲಿ ನೀರಿನ ವ್ಯವಸ್ಥೆ ಇದೆ ಅದನ್ನು ವ್ಯವಸ್ಥಿತವಾಗಿ ರೈತರಿಂದ ಜಾತ್ರಾ ಮಹೋತ್ಸವಕ್ಕೆ ವ್ಯವಸ್ಥಿತವಾಗಿ ತಲುಪಿಸಲು ಬದ್ಧವಿದ್ದೇವೆ….. ಎಂದು ತಾವೇ ನೀರನ್ನ ಕುಡಿದು ಪರೀಕ್ಷಿಸಿದರು.
ಇದೆ ವೇಳೆ ಶ್ರೀ ಗುರು ತಿಪ್ಪೇರುದ್ರ ಸ್ವಾಮಿ ದೇವಸ್ಥಾನದ ಸಿಬ್ಬಂದಿ ಎಸ್ ಸತೀಶ್, ಪಟ್ಟಣ ಪಂಚಾಯಿತಿ ಆರೋಗ್ಯ ನಿರೀಕ್ಷಣಾಧಿಕಾರಿ ಟಿ .ರುದ್ರಮನಿ, ಕಂದಾಯ ಇಲಾಖೆಯ ಗೌಡಗೆರೆ ಗ್ರಾಮ ಲೆಕ್ಕಾಧಿಕಾರಿ ಜಗದೀಶ್, ಸಂತೋಷ್ ನಾಗರಾಜ್ ಸೇರಿದಂತೆ ಮುಂತಾದವರು ಇದ್ದರು