ಚಳ್ಳಕೆರೆ : ನಾಯಕನಹಟ್ಟಿ ವ್ಯಾಪ್ತಿಯ ತಿಮ್ಮಪ್ಪಯ್ಯನಹಳ್ಳಿ ಗ್ರಾಮ ಪಂಚಾಯತಿಯ ಕಚೇರಿಯಲ್ಲಿ ಕರ್ನಾಟಕ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ಪಂಚಾಯತ್ ರಾಜ್ ಇಲಾಖೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ಸಹಯೋಗದೊಂದಿಗೆ ಗ್ರಾಮ ಪಂಚಾಯತಿ ಆರೋಗ್ಯ ಅಮೃತ ಅಭಿಯಾನ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಎಸ್.ಮಂಜಣ್ಣ ಭಾಗವಹಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆಯನ್ನು ನೀಡಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಪ್ರತಿಯೊಬ್ಬ ಪ್ರಜೆಯು ಕರ್ತವ್ಯವಾಗಿದೆ ಇದರಿಂದ ಸರ್ಕಾರ ಇಂತಹ ಯೋಜನೆಗಳನ್ನು ಜಾರಿಗೆ ತಂದಿರುವುದು ಸಂತಸ ತಂದಿದೆ ಎಂದರು.
ಇದೇ ವೇಳೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಮಾತನಾಡಿ ಗ್ರಾಮೀಣ ಪ್ರದೇಶದ ಜನರು ಉತ್ತಮ ಆಹಾರ ಶುದ್ಧ ಕುಡಿಯುವ ನೀರು ಸ್ವಚ್ಛತೆ ಸೇರಿದಂತೆ ಇವುಗಳನ್ನು ಉತ್ತಮವಾಗಿ ಸೇವಿಸಿದಲ್ಲಿ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು.
ಈ ಕಾರ್ಯಕ್ರಮದ ಉದ್ದೇಶ ಗ್ರಾಮ ಪಂಚಾಯತಿ ಅಡಿಯಲ್ಲಿ ಹಾಗೂ ಗ್ರಾಮ ಪಂಚಾಯತಿ ಸಮ್ಮುಖದಲ್ಲಿ ಎನ್‌ಸಿಡಿ ಕಾರ್ಯಕ್ರಮವನ್ನು ಅಭಿವೃದ್ಧಿಪಡಿಸುವುದು ಸಂಕ್ರಾಮಿಕ ರೋಗಗಳು ಪತ್ತೆ ಹಚ್ಚುವಿಕೆ ಕಾರ್ಯ ಕೈಗೊಳ್ಳುವುದು ನಂತರ ತರಬೇತಿಯಲ್ಲಿ ಬಿಪಿ ಮಧುಮೇಹ ಪರೀಕ್ಷೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಗ್ರಾಮೀಣ ಭಾಗದ ಜನರು ಪಡೆದುಕೊಳ್ಳಬಹುದು ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಕೆ ಎಸ್ ಮಂಜಣ್ಣ, ಸದಸ್ಯರಾದ ಜಿ ಎಸ್ ವಿಜಯ್ ಕುಮಾರ್, ರೇವಣ್ಣ, ಪ್ರೇಮಲತಾ ಶಂಕರ್ ಮೂರ್ತಿ, ಶಾಂತಮ್ಮ ಬಸವರಾಜ್, ಅನಿತಮ್ಮ ರವಿಕುಮಾರ್, ಹಾಗೂ ಪಂಚಾಯಿತಿ ಸಿಬ್ಬಂದಿಗಳಾದ ಕಾಯಕ ಮಿತ್ರ ಸಿ ಉಮಾ, ಕಂಪ್ಯೂಟರ್ ಆಪರೇಟರ್ ಆರ್ ಸಂತೋಷ್, ಕ್ಲರ್ಕ್ ಬಿ ತಿಪ್ಪೇಸ್ವಾಮಿ, ಆಶಾ ಕಾರ್ಯಕರ್ತೆರಾದ ವಿಜಯಮ್ಮ, ಆಶಾ, ರೋಜಾ, ಪಾತಲಿಂಗಮ್ಮ, ರತ್ನಮ್ಮ, ಸವಿತಾ ಬಾಯಿ, ಅಂಗನವಾಡಿ ಶಿಕ್ಷಕಿಯರಾದ ಚನ್ನಮ್ಮ, ಕಾವೇರಿ ,ಸರ್ವ ಮಂಗಳಮ್ಮ, ಹರ್ಷಿತ, ಸೇರಿದಂತೆ ಮುಂತಾದವರು ಇದ್ದರು