ಚಳ್ಳಕೆರೆ : ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಹಾಗೂ ರಾಜ್ಯ ಬಿಜೆಪಿ ಸರ್ಕಾರಕ್ಕೆ ಅಭಿನಂದನೆಗಳನ್ನು ತಿಳಿಸುವ ಸಲುವಾಗಿ ಚಳ್ಳಕೆರೆ ನಗರದ ಡಾ.ಬಿ.ಆರ್.ಅಂಬೇಡ್ಕರ್ & ಬಾಬು ಜಗಜೀವನ್ ರಾಂ,ರವರ ಪುತ್ಥಳಿ ಹಾಗೂ ರಾಜ್ಯ ನಾಯಕರುಗಳ ಭಾವಚಿತ್ರಕ್ಕೆ ಮಾಲಾರ್ಪಣೆ ಮತ್ತು ಹಾಲಿನ ಅಭಿಷೇಕದ ಮೂಲಕ ಅಭಿನಂದನೆ ಸಲ್ಲಿಸಲಾಯಿತು.

ಬಿಜೆಪಿ ಮಂಡಲ ಅಧ್ಯಕ್ಷರಾದ ಸೂರನಹಳ್ಳಿ ಶ್ರೀನಿವಾಸ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್ ಯಾದವ್, ಸಮಾಜದ ಮುಖಂಡರಾದ ಮಾಜಿ ನಗರಸಭೆ ಸದಸ್ಯ ಶಿವಮೂರ್ತಿ, ಮಾಜಿ ನಗರಸಭೆ ಉಪಾಧ್ಯಕ್ಷ ವಿಜಯ್ ಕುಮಾರ್, ಬಿಜೆಪಿ ಎಸ್‌ಟಿ.ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಆರ್.ಅನಿಲ್ ಕುಮಾರ್, ಆರ್.ಡಿ.ಮಂಜುನಾಥ್, ಸುರೇಶ್, ಚಂದ್ರಣ್ಣ, ನಾಗರಾಜ್, ಕಾಂತರಾಜ್, ಬೀಮನಕೆರೆ ಶಿವಮೂರ್ತಿ, ತಿಪ್ಪೇರುದ್ರಪ್ಪ, ರಾಮಂಜನೇಯ, ಮಾರುತಿ, ನನ್ನಿವಾಳ ನಾಗರಾಜ್, ಜಾಲಿ ಮಂಜುನಾಥ, ವಿವಿಧ ದಲಿತ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!