ಚಳ್ಳಕೆರೆ : ಬೇಸಿಗೆಯಲ್ಲಿ ಕಲುಷಿತ ನೀರಿನ ಸೇವನೆಯಿಂದ ಸಂಭಾವ್ಯ ವಾಂತಿ-ಬೇಧಿ ಪ್ರಕರಣಗಳು ಉಂಟಾಗುವ ಹಿನ್ನಲೆಯಲ್ಲಿ ಶುದ್ದೀಕರಿಸಿದ ಅಥವಾ ನೀರು ಶುದ್ದೀಕರಣ ಘಟಕದ ನೀರನ್ನು ಕುಡಿಯಲು ಬಳಸಿ ಎಂದು ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ.ಎನ್. ಕಾಶಿ ಅವರು ತಿಳಿಸಿದ್ದಾರೆ.
ಅವರು ನಗರದ ಆರೋಗ್ಯಧಿಕಾರಿ ಕಛೇರಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು
ಬೇಸಿಗೆ ಕಾಲದಲ್ಲಿ ಹೆಚ್ಚಿನದಾಗಿ ಹಣ್ಣಿನ ರಸ ಮತ್ತು ಪಾನಕಗಳನ್ನು ಕುಡಿಯಿರಿ. ಹತ್ತಿಯ ನುಣುಪಾದ ಬಟ್ಟೆ ಮತ್ತು ಟಿಶ್ಯೂ ಕರವಸ್ತ್ರದಿಂದ ಬೆವರನ್ನು ಒರೆಸಿರಿ. ನೀರು, ಮಜ್ಜಿಗೆ ಮತ್ತು ಎಳೆನೀರು ಕುಡಿಯಬಹುದು. ಬೆಚ್ಚಗಿನ, ಮಸಾಲೆ ರಹಿತ, ಶುದ್ಧ ಸಾತ್ವಿಕ ಆಹಾರ ಸೇವಿಸಿರಿ, ಗಾಳಿಯಾಡುವಂತಿರುವ ಪಾದರಕ್ಷೆ ಧರಿಸಿ, ಮನೆಯಿಂದ ಹೊರಗಡೆ ಹೋಗುವಾಗ ಜೊತೆಯಲ್ಲಿ ತಪ್ಪದೇ ಆದ್ಯತೆ ಶುದ್ಧ ಕುಡಿಯುವ ನೀರನ್ನು ತೆಗೆದು ಕೊಂಡು ಹೋಗಬೇಕು. ವ್ಯಕ್ತಿ ತೊದಲು ಮಾತು ಅಥವಾ ಅರ್ಥರಹಿತವಾಗಿ ಬಡಬಡಿಸಿದ್ದಲ್ಲಿ, ಕೂಡಲೇ ನೆರಳಿನ
ಪ್ರದೇಶಕ್ಕೆ ಸ್ಥಳಾಂತರಿಸಿರಿ, ಕೆಳಗೆ ಮಲಗಿಸಿ, ಕಾಲುಗಳನ್ನು ಮೇಲಕೆತ್ತಿ ಹಣೆ ,ಕತ್ತು ಪಾದ ತೊಡೆಯ ಸಂದುಗಳನ್ನು ಒದ್ದೆ ಬಟ್ಟೆಯಿಂದ ಒರೆಸಿರಿ (ತಂಪಾದ ಅಥವಾ ಐಸ್ ನೀರಿನಿಂದ ಒರೆಸಬೇಡಿ). ಚರ್ಮ ಕೆಂಪಾದರೆ, ಬೆವರು ಕಡಿಮೆಯಾದರೆ,ದೇಹದ ಉಷ್ಣತೆ ಜಾಸ್ತಿಯಾದರೆ, ದೀರ್ಘವಾದ ತೀರ್ವ ಉಸಿರಾಟವಿದ್ದಲ್ಲಿ, ತುರ್ತಾಗಿ ವೈದ್ಯರನ್ನು ಸಂಪರ್ಕಿಸಿ ಹತ್ತಿರದ ವೈದ್ಯರನ್ನು ಕರೆಸಿರಿ ಅಥವಾ 104ಕ್ಕೆ ಕರೆ ಮಾಡಿರಿ,
ಆಪತ್ಕಾಲದಲ್ಲಿ ನೀವು ಕೈಗೊಳ್ಳುವ ಶೀಘ್ರ ಸಮಯೋಚಿತ ಪ್ರಜ್ಞಾಪೂರ್ವಕ ಕ್ರಮವು ಆಘಾತಕ್ಕೊಳಗಾದ ವ್ಯಕ್ತಿಯ ಪ್ರಾಣ ಉಳಿಸಬಲ್ಲದು. ಬೇಸಿಗೆಯಲ್ಲಿ ಕಲುಷಿತ ನೀರಿನ ಸೇವನೆಯಿಂದ ಸಂಭಾವ್ಯ ವಾಂತಿ-ಬೇಧಿ ಪ್ರಕರಣಗಳು ಉಂಟಾಗುವ ಹಿನ್ನಲೆಯಲ್ಲಿ ಶುದ್ದೀಕರಿಸಿದ ಅಥವಾ ನೀರು ಶುದ್ದೀಕರಣ ಘಟಕದ ನೀರನ್ನು ಕುಡಿಯಲು ಬಳಸಿ, ಕೈಗಳನ್ನು ಸಾಬೂನು ಮತ್ತು ನೀರಿನಿಂದೆ 45 ಸೆಕೆಂಡ್‌ಗಳ ಕಾಲ ತೊಳೆದುಕೊಂಡ ನಂತರ ಸೇವಿಸಿ. ನೀರಿನ ಸಂಗ್ರಹಣಗಳ ಮೇಲೆ ತಪ್ಪದೇ ಮುಚ್ಚಳ ಮುಚ್ಚಿರಿ. ಮಲ, ಮೂತ್ರ ವಿಸರ್ಜನೆಗಾಗಿ ಶೌಚಾಲಯ ಬಳಸಿ ಮತ್ತು ಸುರಕ್ಷಿತ ಆಹಾರ ಮಾತ್ರ ಸೇವಿಸಿ, ಆದಷ್ಟು ಮನೆಯಲ್ಲಿ ತಯಾರಿಸಿದ ಆಹಾರಕ್ಕೆ ಆದ್ಯತೆ ನೀಡಬೇಕು.ಶಾಖಾಘತಕ್ಕೆ ಒಳಗಾದಾಗ ಸಂಭ್ರಾAತಿ, ಅಸಂಗತ ಮಾತು, ವ್ಯತ್ಯಸ್ಥ ಪ್ರಜ್ಞೆ ಲಕ್ಷಣಗಳಾಗಿವೆ.
ಮಾಡಬಾರದು: ಬಿಗಿಯಾದ ಗಾಢ ಬಣ್ಣದ ,ಸಿಂಥೆಟಿಕ್ ಬಟ್ಟೆ, ಧರಿಸಬಾರದು. ಕುಷನ್‌ಯುಕ್ತ ಕುರ್ಚಿಯಲ್ಲಿ ಕೂಡಬೇಡಿ .ಸೋಡಾ ಮತ್ತು ಇತ್ಯಾದಿ ಕಾರ್ಬೋನೇಟೆಡ್ ತಂಪಾದ ತಂಪು ಪಾನಿಯಗಳನ್ನು ಕುಡಿಯಬೇಡಿ ಬಾಯರಿಕೆಯಾದಾಗೆಲೆಲ್ಲಾ ಕಡ್ಡಾಯವಾಗಿ ನೀರನ್ನು ಕುಡಿಯಿರಿ) ಬೆವರನ್ನು ಒರೆಸಲು ಒರಟಾದ ಉಪಯೋಗಿಸಬಾರದು. ಕಾಫಿ, ಟೀ, ಅತಿ ಸಕ್ಕರೆ ಅಂಶವುಳ್ಳ ಪಾನಿಯ ಅತಿಯಾಗಿ ಸೇವಿಸಬಾರದು. ಬಿಸಿಯಾದ ಮಸಾಲೆಯುಕ್ತ ಆಹಾರ ತಿನ್ನಬಾರದು, ಮಾಂಸಹಾರ ವರ್ಜಿಸಿ ಮತ್ತು ಮಧ್ಯಪಾನ ವರ್ಜಿಸಬೇಕು. ಬಿಗಿಯಾದ ಗಾಳಿಯಾಡದ ಪಾದರಕ್ಷೆ ಮತ್ತು ಶೂ ಧರಿಸಬಾರದು. ಉಷ್ಣತೆಯಿಂದ ಸುಸ್ತಾದ ವ್ಯಕ್ತಿಯನ್ನು ತುಂಬಾ ತಣ್ಣಗಿನ ಅಥವಾ ಶೀತಲೀಕರಿಸಿದ ನೀರಿನಿಂದ ಒರೆಸಬಾರದು. (ಇದರಿಂದ ವ್ಯಕ್ತಿಯ ದೇಹದ ಹೊರಪದರದಲ್ಲಿನ ರಕ್ತನಾಳಗಳು ಸಂಕುಚಿತಗೊAಡು ದೇಹದ ಒಳಗಿನ ಉಷ್ಣತೆ ದೇಹದೊಳಗೆ ಬಂಧಿತವಾಗಿ ಆತನ ಅಂಗಾAಗಗಳನ್ನು ನಿಷ್ಕ್ರಿಯಗೊಂಡು, ಹೆಚ್ಚಿನ ಹಾನಿಯಾಗಬಹುದು. ವ್ಯಕ್ತಿಯ ತೊದಲು ತೊದಲಾಗಿ, ವಿಚಿತವಾಗಿ ಮಾತನಾಡಿದರೆ ಆತಂಕ ಪಡಬೇಡಿ, ಶಾಂತಿ ಸಮಾಧಾನದಿಂದ ಶೀಘ್ರವಾಗಿ ಕ್ರಮ ಕೈಗೊಳ್ಳಿರಿ
ಬೇಸಿಗೆಯಲ್ಲಿ ಕುತ ನೀರಿನ ಸೇವನೆಯಿಂದ ಸಂಭಾವ್ಯ ವಾಂತಿ- ಪಕರಣಗಳು ಉಂಟಾಗುವ ಹಿನ್ನೆಲೆಯಲ್ಲಿ ಶುದ್ದೀಕರಿಸದೇ ಇರುವ ಅಥವಾ ಕೆರೆ, ಕುಂಟೆಗಳ ನೀರನ್ನು ನೇರವಾಗಿ ಕುಡಿಯಬೇಡಿ, ಕೈಗಳನ್ನು ತೊಳೆದುಕೊಳ್ಳದೇ ಆಹಾರವನ್ನು ಸೇವಿಸಬೇಡಿ. ನೀರಿನ ಸಂಗ್ರಹಣಗಳ ಮೇಲೆ ಮುಚ್ಚಳ ಮುಚ್ಚದೇ ಬಿಡಬೇಡಿ. ಬಯಲು ಪ್ರದೇಶಗಳಲ್ಲಿ ಮಲ, ಮೂತ್ರ ವಿಸರ್ಜನೆ ಮಾಡವಾರದು. ರಸ್ತೆ ಬದಿ ತೆರೆದಿಟ್ಟ ಆಹಾರ ಪದಾರ್ಥ ಮತ್ತು ಕತ್ತರಿಸಿಟ್ಟ ಹಣ್ಣುಗಳನ್ನು ತಿನ್ನಬಾರದು. ತಯಾರಿಸಿದ ಆಹಾರವನ್ನು ಮುಚ್ಚಳ ಮುಚ್ಚದಂತೆ ಇಡಬಾರದು
ಶಾಖಾಘಾತಕ್ಕೆ ಒಳಗಾದಾಗ ಚಿಕಿತ್ಸೆ: ನೆರಳಿರುವೆಡೆಗೆ ಸ್ಥಳಾಂತರಿಸಿ, ವ್ಯಕ್ತಿಯ ವಸ್ತ್ರಗಳನ್ನು ಸಡಿಲಗೊಳಿಸಿ, ಅಂಗಾತ ಮಲಗಿಸಿ, ಕಾಲುಗಳನ್ನು ಎತ್ತರಿಸಿ. ಸಾಮಾನ್ಯ ನೀರಿನಿಂದ ದೇಹವನ್ನು ಒರೆಸಿರಿ. ಹತ್ತಿರದ ವೈದ್ಯರನ್ನು ಕರೆಸಬೇಕು ಎಂದು ತಿಳಿಸಿದ್ದಾರೆ.
ಎಲ್ಲಾ ತಾಲ್ಲೂಕ ಸಾರ್ವಜನಿಕ ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕೇಂದ್ರ ಮತ್ತು ಪಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬೇಸಿಗೆಯಲ್ಲಿ ಬರಬಹುದಾದ ರೋಗಗಳ ಆರೈಕೆಗಾಗಿ, ಓಆರ್‌ಎಸ್, ಐವಿ, ಪ್ಲೂಯಿಡ್ ಮತ್ತು ಜೀವರಕ್ಷಕ ಔಷಧಗಳ ದಾಸ್ತಾನು ಇಟ್ಟುಕೊಳ್ಳುವಂತೆ ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿಗಳು ನೀರಿನ ಗುಣಮಟ್ಟದ ಪರೀಕ್ಷೆಯನ್ನು ನಿಯಮಿತವಾಗಿ ಮಾಡುವಂತೆ ಅವರು ಸೂಚನೆ ನೀಡಿದ್ದಾರೆ