ಚಳ್ಳಕೆರೆ:
ಗೌರಿಪುರ ದುರ್ಗಮ್ಮ ದೇವಸ್ಥಾನಕ್ಕೆ ಬಿಜೆಪಿ ಮಂಡಲದ ತಾಲೂಕು ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಪರ ಅಂಬೇಡ್ಕರ್ ಕಾಲೋನಿಯಲ್ಲಿ ಮಾತಯಾಚನೆ ನಡೆಸಿದರು.
ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಂಗಸ್ವಾಮಿ ಕೋಟೆನಾಡು ಮಾತನಾಡಿ ಕಾಂಗ್ರೆಸ್ ಪಕ್ಷದವರು ನಮ್ಮ ಮಾದಗರ ಜನಾಂಗದವರನ್ನು ಉಪಯೋಗಿಸಿದ್ರು ಅಷ್ಟೇ ಬೇರೆ ಏನು ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಿಲ್ಲ… ಅದರಿಂದ ಎಲ್ಲಾ ಮಾದಿಗರ ಜನಾಂಗದ ಎಲ್ಲರೂ ಬಿಜೆಪಿಗೆ ಮತ ಹಾಕಿ ಬಿಜೆಪಿ ಪಕ್ಷವನ್ನು ಗೆಲ್ಲಿಸಬೇಕು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲದ ತಾಲೂಕು ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್, ಬಿಜೆಪಿ ಮುಖಂಡ ಅಕ್ಷಯ್ ರೈ, ಪಕ್ಷದ ಮುಖಂಡರು ಸೇರಿದಂತೆ ಕಾಲೋನಿ ಸದಸ್ಯರು ಉಪಸ್ಥಿತರಿದ್ದರು.