ಚಳ್ಳಕೆರೆ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಇದೇ ಮೇ.20ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಚಿತ್ರದುರ್ಗದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ.
ಸಂದರ್ಶನದಲ್ಲಿ ಕರಾವಳಿ ಟೀಚರ್ಸ್ ಹೆಲ್ಪ್ಲೈನ್ ಸಂಸ್ಥೆಯಲ್ಲಿ ಖಾಲಿ ಇರುವ ಟೀಚರ್ಸ್, ನಾನ್ ಟೀಚಿಂಗ್, ವರ‍್ಡ್ನ್ ಮುಂತಾದ ಹುದ್ದೆಗಳು ಮತ್ತು ಮುತ್ತೂಟ್ ಫೈನಾನ್ಸ್ ಅಭ್ಯರ್ಥಿಗಳನ್ನು ನೇರವಾಗಿ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿವೆ.
ಧಾರವಾಡದ ಕರಾವಳಿ ಟೀಚರ್ಸ್ ಹೆಲ್ಪ್ಲೈನ್ ಸಂಸ್ಥೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಖಾಲಿ ಇರುವ 60 ಟೀಚರ್ಸ್ ಹುದ್ದೆಗಳಿಗೆ ಬಿ.ಎ, ಬಿ.ಕಾಂ, ಬಿಸಿಎ, ಬಿ.ಎಸ್ಸಿ, ಡಿ.ಇಡಿ, ಬಿ.ಇಡಿ, ಎಂ.ಎ, ಎಂಕಾA, ಎಂಸಿಎಸ್ಸಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಭಾಗವಹಿಸಬಹುದು ಹಾಗೂ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಖಾಲಿ ಇರುವ ನಾನ್ ಟೀಚಿಂಗ್ 50 ಹುದ್ದೆಗಳಿಗೆ ಎಸ್ಎಸ್ಎಲ್ಸಿ, ಪಿಯುಸಿ, ಬಿ.ಎ, ಬಿ.ಕಾಂ, ಬಿಸಿಎ, ಬಿಎಸ್ಸಿ, ಎಂ.ಎ, ಎಂ.ಕಾA, ಎಂಎಸ್ಸಿ ವಿದ್ಯಾರ್ಹತೆ ಹೊಂದಿರುವವರು ಭಾಗವಹಿಸಬಹುದು. ಚಿತ್ರದುರ್ಗ ಮುತ್ತೂಟ್ ಫೈನಾನ್ಸ್ನಲ್ಲಿ ಚಿತ್ರದುರ್ಗ ಜಿಲ್ಲೆಯಾದ್ಯಂತ ಖಾಲಿ ಇರುವ ಜೆ.ಆರ್.ಇ 15 ಹುದ್ದೆಗಳಿಗೆ ಬಿ.ಎ, ಬಿ.ಕಾಂ, ಬಿಸಿಎ, ಬಿ.ಎಸ್ಸಿಯಲ್ಲಿ 2021 ರಿಂದ 2023ರೊಳಗೆ ಉತ್ತೀರ್ಣರಾಗಿರಬೇಕು.
ಆಸಕ್ತರು ಬಯೋಡಾಟಾ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಹಾಗೂ ಫೋಟೋಸ್ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ನೇರ ನೇಮಕಾತಿ ಸಂದರ್ಶನದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿಯ ದೂರವಾಣಿ ಸಂಖ್ಯೆ 7022459064, 8310785143, 8105619020 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

About The Author

Namma Challakere Local News
error: Content is protected !!